ನೂತನ ರಂಗಮಂದಿರ ಉದ್ಘಾಟನೆ

ರಾಮನಗರ : ತಾಲೂಕಿನ ಬಿಡದಿ ಬಳಿಯಿರುವ ಜ್ಞಾನವಿಕಾಸ ವಿದ್ಯಾಸಂಘದ ವತಿಯಿಂದ ಆಯೋಜಿಸಲಾಗಿದ್ದ ಜ್ಞಾನವಿಕಾಸ ತಾಂತ್ರಿಕ ಮಹಾವಿದ್ಯಾಲಯದ ರಜತ ಮಹೋತ್ಸವ–2026 ಹಾಗೂ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನೂತನ ರಂಗಮಂದಿರವನ್ನು ಮಾಜಿ ಸಂಸದ ಡಿ.ಕೆ.ಸುರೇಶ್ ಉದ್ಘಾಟಿಸಿದರು.ಇದೇ ಸಂದರ್ಭದಲ್ಲಿ ರಂಗಭೂಮಿಗೆ ತಮ್ಮ ಅಮೂಲ್ಯ ಕೊಡುಗೆ ನೀಡಿರುವ ಹೆಸರಾಂತ ರಂಗಕರ್ಮಿಗಳು ಹಾಗೂ ಪ್ರತಿಭಾವಂತ ರಂಗಕಲಾವಿದರನ್ನು ಸನ್ಮಾನಿಸಿ ಗೌರವಿಸಿದರು. ಬಳಿಕ ಮಾತನಾಡಿ ಕನ್ನಡ ಭಾಷೆ, ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ಶ್ರೀಮಂತ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಶಿಕ್ಷಣ ಸಂಸ್ಥೆಗಳು ಹಾಗೂ ರಂಗಭೂಮಿಯ ಪಾತ್ರ ಮಹತ್ವದ್ದಾಗಿದೆ ಎಂದರು.
ಸಂಬಂಧಿತ ಸುದ್ದಿಗಳು

ಕೇಂದ್ರ ಸರ್ಕಾರ ಎಥೆನಾಲ್ ಮಿಶ್ರಣ ಮಾಡುವ ವಿಷಯದಲ್ಲಿ ಜನರ ದಾರಿ ತಪ್ಪಿಸುತ್ತಿದೆ : ಪ್ರಿಯಾಂಕ್ ಖರ್ಗೆ ಆರೋಪ
ಬೆಂಗಳೂರು : ಕೇಂದ್ರ ಸರ್ಕಾರ ಪೆಟ್ರೋಲ್ನಲ್ಲಿ ಎಥೆನಾಲ್ ಮಿಶ್ರಣ ಮಾಡುವ ವಿಷಯದಲ್ಲಿ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಐಟಿ-ಬಿಟ…
◷ 07/11/2026
`ಭಾರತ್ ರೈಸ್’ ಹೆಚ್ಚುವರಿ ಹಂಚಿಕೆ
ನವದೆಹಲಿ: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ `ಭಾರತ್ ರೈಸ್’ ಅನ್ನು ಹೆಚ್ಚುವರಿ ಹಂಚಿಕೆ ಮಾಡಿದ್ದು, …
◷ 07/11/2026
ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾಗೆ 4 ರನ್ ಗಳ ರೋಚಕ ಗೆಲುವು
ನವದೆಹಲಿ : ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಡಕ್ವರ್ತ್ ಲೂಯಿಸ್ ನಿಯಮದಡಿ ನ್ಯೂಜಿಲೆಂಡ್ ವಿರುದ್ಧ 4 ರನ್ ಗಳ ರೋಚಕ ಗೆಲುವು ಸ…
◷ 07/11/2026
ಪಂಜಿನ ಮಹತ್ವದ ಕುರಿತು ವಿಶೇಷ ಜಾಗೃತಿ
ಚಾಮರಾಜನಗರ : ಜೈ ಹಿಂದ್ ಪ್ರತಿಷ್ಠಾನ ಮತ್ತು ಋಗ್ವೇದಿ ಯೂಥ್ ಕ್ಲಬ್ ವತಿಯಿಂದ ಜೈಹಿಂದ್ ಕಟ್ಟೆಯಲ್ಲಿ ದೀಪಾವಳಿ ಹಬ್ಬ ಮತ್ತು ವಿಶೇಷವಾ…
◷ 07/11/2026
