ಹಾಸನ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಇಂದು ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನವನ್ನು ಪಡೆದರು.ಈ ಸಂದರ್ಭ ಮಾತನಾಡಿ  ಹಾಸನದ ಅಧಿದೇವತೆ, ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಶಕ್ತಿ ಸ್ವರೂಪಿಣಿ ಶ್ರೀ ಹಾಸನಾಂಬೆಯ ಸನ್ನಿಧಿಗೆ ಇಂದು ಕುಟುಂಬ ಸಮೇತ ಭೇಟಿ ನೀಡಿ, ತಾಯಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದೇನೆ. ಇದೇ ವೇಳೆ ಜಗನ್ಮಾತೆಯ ಕೃಪಾಶೀರ್ವಾದದಿಂದ ನಾಡಿನ ಪ್ರತಿಯೊಂದು ಮನೆಯಲ್ಲೂ ಸುಖ, ಶಾಂತಿ, ನೆಮ್ಮದಿ ನೆಲೆಸಲಿ, ಎಲ್ಲರ ಬದುಕಿನಲ್ಲಿ ಒಳಿತು ಮತ್ತು ಸಮೃದ್ಧಿ ತುಂಬಿರಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ, ಸಂಸದ ಶ್ರೇಯಸ್ ಎಂ. ಪಟೇಲ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.