ಬಳ್ಳಾರಿ :  ಬಳ್ಳಾರಿ ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್, ಉಪ ಮೇಯರ್ ಹಾಗೂ ವಿವಿಧ ಸ್ಥಾಯಿ ಸಮಿತಿ ಸ್ಥಾನಗಳಿಗೆ ನವೆಂಬರ್ 13 ರಂದು ಮಧ್ಯಾಹ್ನ 12.30 ಗಂಟೆಗೆ ಬಳ್ಳಾರಿ ಮಹಾನಗರ ಪಾಲಿಕೆಯ ಶ್ರೀ ಕೃಷ್ಣದೇವರಾಯ ಸಭಾಂಗಣದಲ್ಲಿ ಚುನಾವಣೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.ಅಧ್ಯಕ್ಷಾಧಿಕಾರಿಗಳು ಹಾಗೂ ಕಲಬುರಗಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಈ ಚುನಾವಣೆ ನಡೆಯಲಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್. ಮಂಜುನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.