ಮೈಸೂರು :  ಮೈಸೂರು–ಬೆಂಗಳೂರು ಹೆದ್ದಾರಿಯ ಮಣಿಪಾಲ್ ಆಸ್ಪತ್ರೆ ಸಮೀಪದ ಕೆಂಪೇಗೌಡ ವೃತ್ತದಲ್ಲಿ ನಡೆಯುತ್ತಿರುವ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಇಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ್‌ ಒಡೆಯರ್ ಪರಿಶೀಲನೆ ನಡೆಸಿದರು.ಈ ಪ್ರಮುಖ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿರುವ ಯೋಜನೆಯ ಪ್ರಗತಿಯನ್ನು ಪರಿಶೀಲಿಸಿದರು.ಇದೇ ವೇಳೆ  ಇದೇ ರಸ್ತೆ ಭಾಗದಿಂದ ಸ್ಥಳಾಂತರಿಸಿ ಮರುನಾಟಿ ಮಾಡಲಾದ ಮರಗಳ ಸ್ಥಿತಿಗತಿಯನ್ನೂ ಪರಿಶೀಲಿಸಿ, ಮೂಲಸೌಕರ್ಯ ಅಭಿವೃದ್ಧಿಯ ಜೊತೆಗೆ ಪರಿಸರ ಸಂರಕ್ಷಣೆಗೂ ಆದ್ಯತೆ ನೀಡಬೇಕಾದ ಮಹತ್ವವನ್ನು ಒತ್ತಿಹೇಳಿದರು.