ಬೆಂಗಳೂರು :  ಸೋಮವಾರ ಸಿಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಕೃಪಾ ಆಳ್ವಾ ಹಾಜರಾದರು. ಇವರು ಮಾಜಿ  ಮುಖ್ಯಮಂತ್ರಿ  ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಿಂದ ಉಚ್ಛಾಟಿತರಾಗಿದ್ದಾರೆ. ಸೈಬರ್ ಕ್ರೈಂ ಪೊಲೀಸರು ಸುಮಾರು 2 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.ವಿಚಾರಣೆಗೆ ಹಾಜರಾಗಲು ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್ ನೀಡಿತ್ತು. ಮೊಬೈಲ್, ಲ್ಯಾಪ್‌ಟಾಪ್ ಸಮೇತ ವಿಚಾರಣೆಗೆ ಬರುವಂತೆ ಸೂಚಿಸಲಾಗಿತ್ತು. ಪ್ರಕರಣ ಸಂಬಂಧ ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದ ಬಳಿಕ ಇದೇ ಮೊದಲ ಬಾರಿಗೆ ಕೃಪಾ ಆಳ್ವಾ ವಿಚಾರಣೆಗೆ ಹಾಜರಾದರು. 2 ಗಂಟೆ ವಿಚಾರಣೆ ಬಳಿಕ ಮತ್ತೆ ನವೆಂಬರ್ 11 ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ತಿಳಿಸಿದ್ದಾರೆ.