ಕೆಎಸ್ ಆರ್ ಟಿಸಿ ಲಗೇಜ್ ಸಾಗಣೆ ಶುಲ್ಕ ಏರಿಕೆ!

ಬೆಂಗಳೂರು : ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣಿಕರಿಗೆ ಮತ್ತೊಂದು ಶಾಕ್ ನೀಡಿದೆ!, ಈಗಾಗಲೇ ಬಸ್ ಟಿಕೆಟ್ ದರ ಹೆಚ್ಚಳದಿಂದ ಕಂಗಾಲಾಗಿದ್ದ ಪ್ರಯಾಣಿಕರಿಗೆ ಇಂದಿನಿಂದ ಲಗೇಜ್ ಸಾಗಣೆ ಶುಲ್ಕವನ್ನೂ ಏರಿಕೆ ಮಾಡಲಾಗಿದೆ. ರಾಜ್ಯ ಸಾರಿಗೆ ಸಂಸ್ಥೆಯು ಲಗೇಜ್ ದರಗಳನ್ನು ಪರಿಷ್ಕರಿಸಿದ್ದು, ಹೆಚ್ಚಳವಾದ ಹೊಸ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ.ಪರಿಷ್ಕೃತ ದರಗಳ ಪ್ರಕಾರ, ಮೊದಲ ಐದು ಸ್ಟೇಜ್‌ಗಳಿಗೆ ಲಗೇಜ್ ಶುಲ್ಕ 6 ರೂ.ನಿಂದ 10 ರೂ.ಗೆ ಏರಿಕೆಯಾಗಿದೆ. 6 ರಿಂದ 10ನೇ ಸ್ಟೇಜ್‌ಗಳಿಗೆ 10 ರೂ. ಇದ್ದ ಶುಲ್ಕ 15 ರೂ.ಗೆ ಹೆಚ್ಚಳವಾಗಿದ್ದರೆ, 11 ರಿಂದ 15ನೇ ಸ್ಟೇಜ್‌ಗಳಿಗೆ 20 ರೂ. ಇದ್ದ ದರ 25 ರೂ.ಗೆ ಏರಿದೆ. ಪ್ರಯಾಣಿಕರು 10 ಕೆಜಿವರೆಗಿನ ಲಗೇಜ್ ಅನ್ನು ಉಚಿತವಾಗಿ ಸಾಗಿಸಲು ಅವಕಾಶವಿದೆ. ಹಾಗೆಯೇ, 20 ಕೆಜಿವರೆಗಿನ ಭಾರವಾದ ವಸ್ತುಗಳಿಗೂ ಉಚಿತ ಸಾಗಣೆ ಲಭ್ಯವಿದೆ. ಆದರೆ, ನಿಗದಿತ ಮಿತಿಗಿಂತ ಹೆಚ್ಚಿನ ತೂಕದ ಲಗೇಜ್‌ಗೆ ಹೆಚ್ಚುವರಿ ಶುಲ್ಕ ಅನ್ವಯವಾಗಲಿದೆ.ಈ ದರ ಹೆಚ್ಚಳವು ದೈನಂದಿನ ಪ್ರಯಾಣಿಕರು, ವಿಶೇಷವಾಗಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಂಚರಿಸುವ ವ್ಯಾಪಾರಿಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಈಗಾಗಲೇ ಹಲವು ಬೆಲೆ ಏರಿಕೆಗಳಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಈ ಕ್ರಮ ಮತ್ತಷ್ಟು ಆರ್ಥಿಕ ಸಂಕಷ್ಟ ತಂದೊಡ್ಡಿದೆ.
ಸಂಬಂಧಿತ ಸುದ್ದಿಗಳು

ಪ್ರತಿಯೊಬ್ಬ ಅರ್ಹ ರೈತನಿಗೂ ಕನಿಷ್ಠ 5,000 ರೂಪಾಯಿ ಬರ ಪರಿಹಾರ ಸಿಗುವುದನ್ನು ಸರ್ಕಾರ ಖಚಿತಪಡಿಸಲಿದೆ : ಮಾಧ್ಯಮ ಪ್ರಕಟಣೆ ಮೂಲಕ ಡಾ. ಜಿ. ಪರಮೇಶ್ವರ್ ತಿರುಗೇಟು
ಬೆಂಗಳೂರು : ಬರ ಪರಿಹಾರ ವಿತರಣೆ ವಿಚಾರವಾಗಿ ವಿಪಕ್ಷಗಳು ಮಾಡುತ್ತಿರುವ ಸರಣಿ ಆರೋಪಗಳ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್…
◷ 10/11/2026
ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಕುಸಿತ !
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ್ದ ಉದ್ವಿಗ್ನತೆ ಶಮನಗೊಳ್ಳುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಮಂಗಳವಾರ ಅಂತಾರಾಷ್ಟ್ರೀಯ ಮಾರುಕಟ…
◷ 10/11/2026
ಮಂಡ್ಯದಲ್ಲಿ 20 ಸಾವಿರ ಉದ್ಯೋಗ ಸೃಷ್ಟಿಸುವ ಕೈಗಾರಿಕೆಗಳಿಗೆ ಜೆಡಿಎಸ್ ಅಡ್ಡಿ: ಶಾಸಕ ಗಣಿಗ ರವಿ ಆರೋಪ
ಹಾಸನಾಂಬ ದೇವಿ ದರ್ಶನ ಪಡೆದ ಶಾಸಕ
◷ 10/11/2026
ಅನ್ನದಾತರ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ : ಬಿ.ವೈ.ವಿಜಯೇಂದ್ರ ಕಿಡಿ
ಬೆಂಗಳೂರು : ಬರದಿಂದ ತತ್ತರಿಸಿರುವ ನಾಡಿನ ಅನ್ನದಾತರಿಗೆ ಸಾಂತ್ವನ ಹೇಳಬೇಕಾದ ರಾಜ್ಯ ಕಾಂಗ್ರೆಸ್ ಸರ್ಕಾರ, ಕಿಂಚಿತ್ ಮಾನವೀಯತೆಯೂ ಇಲ…
◷ 10/11/2026
