ಜಿಲ್ಲಾಧಿಕಾರಿಗೆ ಸಂಸದರಿಂದ ಪತ್ರ

ಹಾಸನ : ಇಲ್ಲಿನ ಜಿಲ್ಲಾಧಿಕಾರಿ ಪಿಎ ವಾಟ್ಸ್ಆ್ಯಪ್ ಚಾಟ್ ಪ್ರಕರಣ ಸಂಬಂಧ ಡಿಸಿ ಕೆ.ಎಸ್.ಲತಾಕುಮಾರಿಗೆ ಹಾಸನ ಸಂಸದ ಶ್ರೇಯಸ್ ಪಟೇಲ್ ಪತ್ರ ಬರೆದು ಶಶಿಕಿರಣ್ ಅವರನ್ನು ಬೇರೆಡೆಗೆ ನಿಯೋಜಿಸುವಂತೆ ಆಗ್ರಹಿಸಿದ್ದಾರೆ. ಶಶಿಕಿರಣ್ ವಿರುದ್ಧ ಭ್ರಷ್ಟಾಚಾರ ಹಾಗೂ ಕರ್ತವ್ಯ ನಿರ್ವಹಣೆಯಲ್ಲಿ ಅಕ್ರಮಗಳಿಗೆ ಸಂಬಂಧಿಸಿದಂತೆ ದೂರು, ಆರೋಪಗಳು ಕೇಳಿ ಬಂದಿರುವುದರ ಹಿನ್ನೆಲೆಯಲ್ಲಿ ಈ ಆರೋಪಗಳ ಕುರಿತು ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿರುವ ಶಶಿಕಿರಣ್ ಅವರನ್ನು ಜಿಲ್ಲಾಧಿಕಾರಿಗಳ ಕಚೇರಿಯ ಯಾವುದೇ ಕರ್ತವ್ಯದಲ್ಲೂ ಮುಂದುವರಿಸದೆ ಜಿಲ್ಲಾಧಿಕಾರಿ ಕಚೇರಿಯಿಂದ ಹೊರಗೆ ಬೇರೆ ಸೂಕ್ತ ಸರ್ಕಾರಿ ಕಚೇರಿಗೆ ವರ್ಗಾಯಿಸಿ ನಿಯೋಜಿಸಬೇಕು. ಆರೋಪಗಳ ಕುರಿತು ನಡೆಸುವ ತನಿಖೆಯ ಮೇಲೆ ಯಾವುದೇ ಪ್ರಭಾವ ಬೀಳದಂತೆ ಅಗತ್ಯ ಕ್ರಮ ಕೈಗೊಂಡು, ಈ ಮನವಿಯ ಮೇರೆಗೆ ಕೈಗೊಂಡ ಕ್ರಮಗಳ ಬಗ್ಗೆ ಲಿಖಿತವಾಗಿ ತಿಳಿಸುವಂತೆ ವಿನಂತಿ ಮಾಡುವುದಾಗಿ ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಸಂಬಂಧಿತ ಸುದ್ದಿಗಳು

ಪ್ರತಿಯೊಬ್ಬ ಅರ್ಹ ರೈತನಿಗೂ ಕನಿಷ್ಠ 5,000 ರೂಪಾಯಿ ಬರ ಪರಿಹಾರ ಸಿಗುವುದನ್ನು ಸರ್ಕಾರ ಖಚಿತಪಡಿಸಲಿದೆ : ಮಾಧ್ಯಮ ಪ್ರಕಟಣೆ ಮೂಲಕ ಡಾ. ಜಿ. ಪರಮೇಶ್ವರ್ ತಿರುಗೇಟು
ಬೆಂಗಳೂರು : ಬರ ಪರಿಹಾರ ವಿತರಣೆ ವಿಚಾರವಾಗಿ ವಿಪಕ್ಷಗಳು ಮಾಡುತ್ತಿರುವ ಸರಣಿ ಆರೋಪಗಳ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್…
◷ 10/11/2026
ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಕುಸಿತ !
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ್ದ ಉದ್ವಿಗ್ನತೆ ಶಮನಗೊಳ್ಳುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಮಂಗಳವಾರ ಅಂತಾರಾಷ್ಟ್ರೀಯ ಮಾರುಕಟ…
◷ 10/11/2026
ಮಂಡ್ಯದಲ್ಲಿ 20 ಸಾವಿರ ಉದ್ಯೋಗ ಸೃಷ್ಟಿಸುವ ಕೈಗಾರಿಕೆಗಳಿಗೆ ಜೆಡಿಎಸ್ ಅಡ್ಡಿ: ಶಾಸಕ ಗಣಿಗ ರವಿ ಆರೋಪ
ಹಾಸನಾಂಬ ದೇವಿ ದರ್ಶನ ಪಡೆದ ಶಾಸಕ
◷ 10/11/2026
ಅನ್ನದಾತರ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ : ಬಿ.ವೈ.ವಿಜಯೇಂದ್ರ ಕಿಡಿ
ಬೆಂಗಳೂರು : ಬರದಿಂದ ತತ್ತರಿಸಿರುವ ನಾಡಿನ ಅನ್ನದಾತರಿಗೆ ಸಾಂತ್ವನ ಹೇಳಬೇಕಾದ ರಾಜ್ಯ ಕಾಂಗ್ರೆಸ್ ಸರ್ಕಾರ, ಕಿಂಚಿತ್ ಮಾನವೀಯತೆಯೂ ಇಲ…
◷ 10/11/2026
