ರಾಷ್ಟ್ರೀಯ ಹೆದ್ದಾರಿ-766ರಲ್ಲಿ ಧೂಳಿನ ಸಮಸ್ಯೆ: ವಾಹನ ಸವಾರರ ಪರದಾಟ

ಗುಂಡ್ಲುಪೇಟೆ: ಪಟ್ಟಣದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-766 ರಸ್ತೆ ಸಂಪೂರ್ಣ ಧೂಳುಮಯವಾಗಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.ಹೆದ್ದಾರಿಯಲ್ಲಿ ವಾಹನಗಳು ಸಂಚರಿಸುವಾಗ ರಸ್ತೆ ಮೇಲಿರುವ ಧೂಳು ಹೆಚ್ಚಿನ ಪ್ರಮಾಣದಲ್ಲಿ ಗಾಳಿಗೆ ಹರಡುತ್ತಿದ್ದು, ದ್ವಿಚಕ್ರ ವಾಹನ ಸವಾರರು, ಪಾದಚಾರಿಗಳು ಹಾಗೂ ರಸ್ತೆ ಬದಿಯ ವ್ಯಾಪಾರಿಗಳು ಧೂಳಿನಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ವಾಹನಗಳ ಸಂಚಾರದಿಂದ ದಟ್ಟವಾಗಿ ಧೂಳು ಆವರಿಸುವುದರಿಂದ ಎದುರಿನ ವಾಹನಗಳು ಕಾಣದೆ ಸಂಚಾರಕ್ಕೂ ಅಡಚಣೆಯಾಗುತ್ತಿದೆ.ಧೂಳಿನಿಂದ ಸಾರ್ವಜನಿಕರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಆತಂಕ ಎದುರಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಹರಿಸಿ ರಸ್ತೆ ಸ್ವಚ್ಛಗೊಳಿಸುವುದರ ಜೊತೆಗೆ ನಿಯಮಿತವಾಗಿ ನೀರು ಸಿಂಪಡಿಸುವ ಮೂಲಕ ಧೂಳಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸಂಬಂಧಿತ ಸುದ್ದಿಗಳು

ಪ್ರತಿಯೊಬ್ಬ ಅರ್ಹ ರೈತನಿಗೂ ಕನಿಷ್ಠ 5,000 ರೂಪಾಯಿ ಬರ ಪರಿಹಾರ ಸಿಗುವುದನ್ನು ಸರ್ಕಾರ ಖಚಿತಪಡಿಸಲಿದೆ : ಮಾಧ್ಯಮ ಪ್ರಕಟಣೆ ಮೂಲಕ ಡಾ. ಜಿ. ಪರಮೇಶ್ವರ್ ತಿರುಗೇಟು
ಬೆಂಗಳೂರು : ಬರ ಪರಿಹಾರ ವಿತರಣೆ ವಿಚಾರವಾಗಿ ವಿಪಕ್ಷಗಳು ಮಾಡುತ್ತಿರುವ ಸರಣಿ ಆರೋಪಗಳ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್…
◷ 10/11/2026
ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಕುಸಿತ !
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ್ದ ಉದ್ವಿಗ್ನತೆ ಶಮನಗೊಳ್ಳುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಮಂಗಳವಾರ ಅಂತಾರಾಷ್ಟ್ರೀಯ ಮಾರುಕಟ…
◷ 10/11/2026
ಮಂಡ್ಯದಲ್ಲಿ 20 ಸಾವಿರ ಉದ್ಯೋಗ ಸೃಷ್ಟಿಸುವ ಕೈಗಾರಿಕೆಗಳಿಗೆ ಜೆಡಿಎಸ್ ಅಡ್ಡಿ: ಶಾಸಕ ಗಣಿಗ ರವಿ ಆರೋಪ
ಹಾಸನಾಂಬ ದೇವಿ ದರ್ಶನ ಪಡೆದ ಶಾಸಕ
◷ 10/11/2026
ಅನ್ನದಾತರ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ : ಬಿ.ವೈ.ವಿಜಯೇಂದ್ರ ಕಿಡಿ
ಬೆಂಗಳೂರು : ಬರದಿಂದ ತತ್ತರಿಸಿರುವ ನಾಡಿನ ಅನ್ನದಾತರಿಗೆ ಸಾಂತ್ವನ ಹೇಳಬೇಕಾದ ರಾಜ್ಯ ಕಾಂಗ್ರೆಸ್ ಸರ್ಕಾರ, ಕಿಂಚಿತ್ ಮಾನವೀಯತೆಯೂ ಇಲ…
◷ 10/11/2026
