ಕಬ್ಬಿನ ದರ ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ
ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ

ಮಂಡ್ಯ : ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ರೈತರು ಪ್ರತಿಭಟನೆ ನಡೆಸಿದರು.ಕಬ್ಬಿನ ದರ ನಿಗದಿ ಮಾಡದೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಕೇಂದ್ರ- ಹಾಗೂ ರಾಜ್ಯ ಸರ್ಕಾರದ ವಿರುದ್ಧ ರೈತರು ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದರು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕನ್ನಡ ಸೇನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ರೈತರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಕಬ್ಬು ಬೆಳೆಗಾರರರು ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಕುರಿತು ನಿರ್ಲಕ್ಷ್ಯ ತೋರಿದ್ದಾರೆ. ರೈತರ ಜೊತೆ ಸಭೆ ನಡೆಸಿ ಕಬ್ಬಿನ ಬೆಲೆ ನಿಗದಿ ಮಾಡುತ್ತೇವೆ ಎಂದಿದ್ದ ಸಿಎಂ ಡಿ.ಕೆ.ಶಿವಕುಮಾರ್ ಮೌನ ವಹಿಸಿದ್ದಾರೆ. ಇನ್ನೂ ಕೂಡ ಕಬ್ಬಿನ ಬೆಲೆ ನಿಗದಿ ಮಾಡಿಲ್ಲ, ರೈತರು ಸಂಕಷ್ಟದ ಸ್ಥಿತಿಯಲ್ಲಿದ್ದಾರೆ. ರೈತರ ಸಮಸ್ಯೆ ಬಗೆ ಹರಿಸದೆ ಸ್ಟಿಂಗ್ ವಿಚಾರದಲ್ಲಿ ಬ್ಯುಸಿ ಇದ್ದಾರೆ. ತಕ್ಷಣವೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಬ್ಬಿನ ದರ ನಿಗದಿ ಮಾಡುವಂತೆ ಎಚ್ಚರಿಕೆ ನೀಡಿದರು.ಪ್ರತಿಭಟನೆಯಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆ ಕಾರ್ಯಕರ್ತರು ಭಾಗಿಯಾಗಿದ್ದರು.
ಸಂಬಂಧಿತ ಸುದ್ದಿಗಳು

ಬಳ್ಳೂರು ಟಿಪ್ಪರ್ ಅಪಘಾತ: ಮೂಡ್ಲಕಟ್ಟೆ ಕಾಲೇಜಿನ ವಿದ್ಯಾರ್ಥಿ ಶಾಯನ್ ಚಿಕಿತ್ಸೆ ಫಲಿಸದೆ ಸಾವು
ಮೂವರು ಆರೋಪಿಗಳ ಬಂಧನ
◷ 03/11/2026
ಸ್ಟಿಂಗ್ ಆಪರೇಷನ್ ಪ್ರಕರಣ ಇಡೀ ಕರ್ನಾಟಕಕ್ಕೆ ದೊಡ್ಡ ಕಳಂಕ : ಕೆ.ಎನ್.ರಾಜಣ್ಣ ಬೇಸರ
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣ ಇಡೀ ಕರ್ನಾಟಕಕ್ಕೆ ದೊಡ್ಡ ಕಳಂಕ ತಂದಿಟ್ಟ…
◷ 03/11/2026
ನ.13ರಂದು ಮೆಟ್ರೋ ಪಿಂಕ್ ಮಾರ್ಗ ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಬೆಂಗಳೂರು : ಇದೇ ನವೆಂಬರ್ 13 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮೆಟ್ರೋ ಪಿಂಕ್ ಮಾರ್ಗವನ್ನು ಉದ್ಘಾಟಿಸಲಿದ್ದಾರೆ.ಈ ಕುರಿತು ಸ…
◷ 03/11/2026
ಶೂಟಿಂಗ್ : ಪುರುಷರ 50 ಮೀ. ಪಿಸ್ತೂಲ್ ವಿಭಾಗದಲ್ಲಿ ಭಾರತಕ್ಕೆ ಚಿನ್ನದ ಪದಕ!
ನವದೆಹಲಿ : ದೋಹಾದಲ್ಲಿ ನಡೆಯುತ್ತಿರುವ ಐಎಸ್ಎಸ್ಎಫ್ (ISSF) ವಿಶ್ವ ಶೂಟಿಂಗ್ ಚಾಂಪಿಯನ್ ಷಿಪ್ ನ ಪುರುಷರ 50 ಮೀಟರ್ ಪಿಸ್ತೂಲ್ …
◷ 03/11/2026
