ಬೆಂಗಳೂರು ಜಾತ್ರೆ ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಿ : ಡಿ.ಎಸ್. ರಮೇಶ್

ಬೆಂಗಳೂರು : ಬೆಂಗಳೂರು ಜಾತ್ರೆ ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳುವಂತೆ ಆಯುಕ್ತ ಡಿ.ಎಸ್. ರಮೇಶ್ ಸೂಚನೆ ನೀಡಿದರು.ಅವರು ಇಲ್ಲಿನ ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ನೇತೃತ್ವದಲ್ಲಿ 2026ರ ಡಿಸೆಂಬರ್ 4 ರಿಂದ 13 ರವರೆಗೆ ನಡೆಯಲಿರುವ 10 ದಿನಗಳ 'ಬೆಂಗಳೂರು ಜಾತ್ರೆ'ಗೆ ಪೂರ್ವ ಸಿದ್ಧತೆ, ವಾರ್ಡ್ ಒನ್ ಅಭಿಯಾನದ ಪ್ರಗತಿ, ರಸ್ತೆ ಗುಂಡಿ ದುರಸ್ತಿ, ಜಂಕ್ಷನ್ ಅಭಿವೃದ್ಧಿ, ತ್ಯಾಜ್ಯ ನಿರ್ವಹಣೆ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳ ಕುರಿತು ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಸಭೆಯಲ್ಲಿ ಬೆಂಗಳೂರು ಜಾತ್ರೆ ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಅಗತ್ಯ ಸಿದ್ಧತೆಗಳು ಹಾಗೂ ಇಲಾಖಾವಾರು ಜವಾಬ್ದಾರಿಗಳ ಕುರಿತು ಚರ್ಚಿಸಲಾಯಿತು. ವಾರ್ಡ್ ಒನ್ ಅಭಿಯಾನ ಅಭಿಯಾನದಡಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಮುಂದಿನ ಕಾರ್ಯಯೋಜನೆ, ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ, ಐಇಸಿ ಚಟುವಟಿಕೆಗಳು ಹಾಗೂ ಸಾರ್ವಜನಿಕ ಜಾಗೃತಿ ಕುರಿತು ಚರ್ಚಿಸಲಾಯಿತು.ಸಭೆಯಲ್ಲಿ ಅಪರ ಆಯುಕ್ತರಾದ (ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್, ಮಹದೇವಪುರ ವಲಯದ ಜಂಟಿ ಆಯುಕ್ತರಾದ ಡಾ. ದಾಕ್ಷಾಯಿಣಿ ಕೆ., ಕೆ.ಆರ್. ಪುರ ವಲಯದ ಜಂಟಿ ಆಯುಕ್ತ ಡಾ. ಯತೀಶ್ ಉಳ್ಳಾಲ್, ಮುಖ್ಯ ಅಭಿಯಂತರರಾದ ಎಂ. ಲೋಕೇಶ್, ವಿಶ್ವನಾಥ್ ಜೆ. ಸೇರಿದಂತೆ ವಲಯ ಹಾಗೂ ವಿಭಾಗ ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸಂಬಂಧಿತ ಸುದ್ದಿಗಳು

ಸ್ವಚ್ಛ ಸರ್ವೇಕ್ಷಣೆ 2025-26 ಪ್ರಶಸ್ತಿ ಪ್ರದಾನ: ವಿಜೇತರನ್ನು ಗೌರವಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ನವದೆಹಲಿ: ಸ್ವಚ್ಛ ಭಾರತ ಮಿಷನ್-ನಗರ ಯೋಜನೆಯಡಿ ಭಾರತದ ಅತ್ಯಂತ ಸ್ವಚ್ಛ ನಗರಗಳನ್ನು ಗುರುತಿಸಿ ಗೌರವಿಸುವ 'ಸ್ವಚ್ಛ ಸರ್ವೇಕ್ಷಣೆ 202…
◷ 11/11/2026
ಸಬ್ಸಿಡಿ ದರಕ್ಕೆ ಅನುಮೋದನೆ
ಬೆಂಗಳೂರು: 2026–27ರ ಹಿಂಗಾರು ಹಂಗಾಮಿಗಾಗಿ ರಂಜಕ ಮತ್ತು ಪೊಟ್ಯಾಷ್ಯುಕ್ತ ರಸಗೊಬ್ಬರಗಳಿಗೆ ಪೋಷಕಾಂಶ ಆಧಾರಿತ ಸಬ್ಸಿಡಿ ದರವನ್ನು ಸ…
◷ 11/11/2026
ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ : ಬಿಜೆಪಿ ಪ್ರತಿಭಟನೆ
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ ಹಾಗೂ ದಿನೇದಿನೇ ಏರಿಕೆಯಾಗುತ್ತಿರುವ ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಸ…
◷ 11/11/2026
ಮಹಾಲಕ್ಷ್ಮಿ ದೇವಾಲಯದ ಜೀರ್ಣೋದ್ಧಾರಕ್ಕೆ ಗುದ್ದಲಿ ಪೂಜೆ
ಮೈಸೂರು : ತಾಲೂಕಿನ ಏಳಿಗೆಹುಂಡಿ ಗ್ರಾಮದಲ್ಲಿ ಇಂದು ಕಾರ್ಗಳ್ಳಿ ಮಹಾಲಕ್ಷ್ಮಿ ದೇವಾಲಯದ ಜೀರ್ಣೋದ್ಧಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್…
◷ 11/11/2026
