ಚಾಮರಾಜನಗರ : ತಾಲೂಕಿನ ಹೆಬ್ಬಸೂರು ಗ್ರಾಮದ ಮೊಹಮ್ಮದ್ ಎಂಬವರ ಜಮೀನಿನ ಅರಿಶಿನ ತೋಟದಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವನ್ನು ಸ್ನೇಕ್ ಅಶೋಕ್ ಅವರು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ.ಅರಿಶಿನ ತೋಟದಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದರಿಂದ ಆತಂಕಗೊಂಡ ಜಮೀನಿನವರು ಸ್ನೇಕ್ ಅಶೋಕ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅವರು ಹೆಬ್ಬಾವನ್ನು ಯಾವುದೇ ಅಪಾಯವಾಗದಂತೆ ಸೆರೆಹಿಡಿದು, ಬಳಿಕ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡುವ ಮೂಲಕ ವನ್ಯಜೀವಿ ಸಂರಕ್ಷಣೆಗೆ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.