ಚಾಮರಾಜನಗರ : ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೋರ್ವರು ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಹೊಳೆ ಜಲಾಶಯದಲ್ಲಿ ನಡೆದಿದೆ.ಮೃತನನ್ನು ಗುಂಡ್ಲುಪೇಟೆ ಪಟ್ಟಣದ ಸ್ವಾಮಿ (55) ಎಂದು ಗುರುತಿಸಲಾಗಿದೆ. ಜಲಾಶಯದಲ್ಲಿ ವ್ಯಕ್ತಿ ಮುಳುಗಿರುವ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಚಾಮರಾಜನಗರ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದರು. ಸತತ ಒಂದು ಗಂಟೆ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಸ್ವಾಮಿ   ಮೃತದೇಹವನ್ನು ಜಲಾಶಯದಿಂದ ಯಶಸ್ವಿಯಾಗಿ ಹೊರತೆಗೆಯಲಾಯಿತು.ಅಗ್ನಿಶಾಮಕ ದಳದ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು. ಮೃತದೇಹವನ್ನು ಮುಂದಿನ ಕ್ರಮಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.