ಮೈಸೂರು :  ತಾಲೂಕಿನ ಏಳಿಗೆಹುಂಡಿ ಗ್ರಾಮದಲ್ಲಿ ಇಂದು ಕಾರ್ಗಳ್ಳಿ ಮಹಾಲಕ್ಷ್ಮಿ ದೇವಾಲಯದ ಜೀರ್ಣೋದ್ಧಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುದ್ದಲಿ ಪೂಜೆ ನೆರವೇರಿಸಿದರು. ದೇವಸ್ಥಾನದ ಮರುನಿರ್ಮಾಣ ಕಾರ್ಯವು ಸುಸೂತ್ರವಾಗಿ ನೆರವೇರಲಿ ಎಂದು ದೇವಿಯಲ್ಲಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ  ಡಾ. ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಬಸವಣ್ಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.