ರಾಮನಗರ:  ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಮರಳವಾಡಿ ಹೋಬಳಿಯ ಸುಂಡಘಟ್ಟ ಗ್ರಾಮದ   ರಾಜಲಕ್ಷ್ಮಿ,  ಚಂದ್ರು ಅವರ ಪುತ್ರಿಯಾದ 14 ವರ್ಷದ   ನವ್ಯಶ್ರೀ ಅವರಿಗೆ ಆಕ್ಸಿಜನ್ ಕಾನ್ಸೆಂಟ್ರೇಟರ್ ಅನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಸ್ತಾಂತರಿಸಿದರು.   ಬಾಲಕಿಯು ಈ ಆಕ್ಸಿಜನ್ ಕಾನ್ಸೆಂಟ್ರೇಟರ್ ಅನ್ನು ಶಾಲಾ ಬ್ಯಾಗ್ ನಂತೆಯೇ ತೆಗೆದುಕೊಂಡು ಹೋಗಬಹುದಾಗಿದೆ. ಅತ್ಯಂತ ಸುಧಾರಿತ ತಂತ್ರಜ್ಞಾನದ ಕಾನ್ಸೆಂಟ್ರೇಟರ್  ಇದಾಗಿದೆ ಎನ್ನಲಾಗಿದೆ.ಅನಾರೋಗ್ಯದಿಂದ ಬಳಲುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಶ್ರೀ ಅವರ ಪೋಷಕರ ಮನವಿಯ ಮೇರೆಗೆ ₹2.50 ಲಕ್ಷ ಮೌಲ್ಯದ ಆಕ್ಸಿಜನ್ ಕಾನ್ಸೆಂಟ್ರೇಟರ್ ಕೊಡಿಸಲಾಗಿದೆ. ಬಾಲಕಿ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಹಾಗೂ ಚಿಕಿತ್ಸೆಗೆ ಸಂಬಂಧಿಸಿದ ಮಾಹಿತಿಯನ್ನು ಕಾಲಕಾಲಕ್ಕೆ ತಿಳಿಸುವಂತೆ ಪೋಷಕರಿಗೆ ಸೂಚಿಸಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.