58 ಕೋ.ರೂ ವೆಚ್ಚದಲ್ಲಿ ಅತ್ಯಾಧುನಿಕ ಹೊಸ ಬಸ್ ನಿಲ್ದಾಣ ನಿರ್ಮಿಸಲು ಯೋಜನೆ : ಅರುಣ ಕುಮಾರ್ ಎಂ. ವೈ. ಪಾಟೀಲ್

ಕಲಬುರಗಿ : ಇಲ್ಲಿನ ಕೇಂದ್ರ ಬಸ್ ನಿಲ್ದಾಣವನ್ನು ನೆಲಸಮಗೊಳಿಸಿ 58 ಕೋ.ರೂ ವೆಚ್ಚದಲ್ಲಿ ಅತ್ಯಾಧುನಿಕ ಹೊಸ ಬಸ್ ನಿಲ್ದಾಣ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣ ಕುಮಾರ್ ಎಂ. ವೈ. ಪಾಟೀಲ್ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸ್ ನಿಲ್ದಾಣ ಬಹಳ ಹಳೆಯದಾಗಿದ್ದರಿಂದ ಹೊಸದಾದ ಬಸ್ ನಿಲ್ದಾಣ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಅದರಂತೆ ನಿಗಮದ ಕೇಂದ್ರ ಕಚೇರಿಯನ್ನು 20 ಕೋ.ರೂ ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿದ್ದು, ಟೆಂಡರ್ ಸಹ ಕರೆಯಲಾಗಿದೆ. ಕಲಬುರಗಿ ನಗರ ಸಾರಿಗೆ ಬಸ್ ನಿಲ್ದಾಣ ಕಾಮಗಾರಿ ಪೂರ್ಣಕ್ಕೆ ಸಹ ಆದ್ಯತೆ ನೀಡಲಾಗುವುದು ಎಂದು ವಿವರಣೆ ನೀಡಿದರು.ವರ್ಷದ ಅವಧಿಯಲ್ಲಿ ನಿಗಮದಲ್ಲಿ ಸಾಕಷ್ಟು ಸಾಧನೆಗಳನ್ನು ತೋರಲಾಗಿದ್ದು, ಪ್ರಮುಖವಾಗಿ ನಿಗಮಕ್ಕೆ ರಾಜ್ಯ ಸರ್ಕಾರ ಹಾಗೂ ಕೆಕೆಆರ್ ಡಿಬಿ ಅನುದಾನದಲ್ಲಿ 400 ಬಸ್ ಗಳ ಖರೀದಿ ಮಾಡಲಾಗಿದ್ದು, ಅದೇ ತೆರನಾಗಿ 2026-27ನೇ ಸಾಲಿನಲ್ಲಿ ಸರ್ಕಾರದ ಆಯವ್ಯಯದಲ್ಲಿ ನಿಗಮಕ್ಕೆ 200 ಬಸ್ ಗಳ ಹಂಚಿಕೆ ಮಾಡಲಾಗಿದೆ. ಇವುಗಳನ್ನು ಪಡೆಯಲು ಶ್ರಮಿಸಲಾಗುವುದು. ಶೀಘ್ರದಲ್ಲಿ ನಿಗಮಕ್ಕೆ ಸೇರ್ಪಡೆಯಾಗಲಿದೆ. ಈ ಬಸ್ ಗಳ ಸೇರ್ಪಡೆಯಾದ ನಂತರ ಬಸ್ ಗಳ ಸಮಸ್ಯೆ ತಕ್ಕ ಮಟ್ಟಿಗೆ ದೂರಾಗುವುದು ಎಂದರು.
ಸಂಬಂಧಿತ ಸುದ್ದಿಗಳು

ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ ನನ್ನ ಭಾಷಣ ಕಟ್! : ಕೃಷ್ಣಬೈರೇಗೌಡ
ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಸಚಿವನಿಗೆ ಮೆಟ್ರೋ ಉದ್ಘಾಟನೆಯಲ್ಲಿ ಮಾತನಾಡಲು ಇಲ್ಲ ಅವಕಾಶ ಎಂದು ತಮ್ಮ ಅಸಮಾಧಾನವನ್ನು ಸಚಿವ ಕೃ…
◷ 12/11/2026
1000 ಕೋಟಿಯತ್ತ ದಾಪುಗಾಲಿಟ್ಟ `ರಾಮಾಯಣ ಭಾಗ1’
ಮುಂಬೈ : ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ನಟಿಸಿರುವ ನಿತೇಶ್ ತಿವಾರಿ ನಿರ್ದೇಶನದ `ರಾಮಾಯಣ’ ಬಾಕ್ಸ್ ಆಫೀಸ್ ಭರ್ಜರಿ…
◷ 12/11/2026
ಹೊಗೆ ಉಗುಳುತ್ತಿರುವ ಕೆಎಸ್ಆರ್ಟಿಸಿ ಬಸ್ : ವಾಯುಮಾಲಿನ್ಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದ ಅಧಿಕಾರಿಗಳು?
ಗುಂಡ್ಲುಪೇಟೆ : ವಾಯುಮಾಲಿನ್ಯ ತಡೆಗಟ್ಟಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೂ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಗು…
◷ 12/11/2026
ನ.15ರಂದು ರಾಜ್ಯದಲ್ಲಿ 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆ ಪೂರ್ವಭಾವಿ ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ನವೆಂಬರ್ 15ರಂದು ರಾಜ್ಯದಲ್ಲಿ 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ನಡೆಯಲಿರುವ ಪೂರ್ವಭಾವಿ ಪರೀಕ್ಷೆಗೆ ಸಂಬಂಧಿ…
◷ 12/11/2026
