ಯಳಂದೂರಿನಲ್ಲಿ ಬೈಕ್ ಕಳ್ಳನ ಬಂಧನ : 12 ಲಕ್ಷ ರೂ. ಮೌಲ್ಯದ 19 ಬೈಕ್ ಗಳು ವಶಕ್ಕೆ

ಯಳಂದೂರು : ಮೋಟಾರ್ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಬಂಧಿಸಿರುವ ಯಳಂದೂರು ಪೊಲೀಸರು, ವಿವಿಧ ಕಂಪನಿಗಳ ಒಟ್ಟು 19 ಮೋಟಾರ್ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಬೈಕ್ ಗಳ ಅಂದಾಜು ಮೌಲ್ಯ 12 ಲಕ್ಷ ರೂ. ಎಂದು ಪೊಲೀಸರು ತಿಳಿಸಿದ್ದಾರೆ.ಸೆ. 9ರಂದು ರಾಜೇಂದ್ರ ಎಂಬವರು ಯಳಂದೂರು ಪಟ್ಟಣದ ಎಸ್‌ಎಲ್‌ಎನ್ ಕಾಂಪ್ಲೆಕ್ಸ್‌ನಲ್ಲಿರುವ ಮೊಬೈಲ್ ರಿಪೇರಿ ಅಂಗಡಿಯ ಮುಂಭಾಗ ತಮ್ಮ ಕೆಎ-15-ಇಬಿ-2713 ನೋಂದಣಿ ಸಂಖ್ಯೆಯ ಕಪ್ಪು ಬಣ್ಣದ ಹೋಂಡಾ ಯೂನಿಕಾರ್ನ್ ಬೈಕ್ ನಿಲ್ಲಿಸಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಸಂಜೆ 7 ಗಂಟೆಗೆ ಬಂದು ನೋಡಿದಾಗ ಬೈಕ್ ಕಳುವಾಗಿತ್ತು. ಈ ಸಂಬಂಧ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಖಚಿತ ಮಾಹಿತಿ ಆಧರಿಸಿ ಯಳಂದೂರು ತಾಲೂಕಿನ ಮಲಾರಪಾಳ್ಯ ಗ್ರಾಮದ ಶಿವರುದ್ರಪ್ಪ ಅವರ ಪುತ್ರ ದೊರೇಶ್ ಅಲಿಯಾಸ್ ದೊರೆಸ್ವಾಮಿ (30) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.ವಿಚಾರಣೆ ವೇಳೆ ಚಾಮರಾಜನಗರ ಪಟ್ಟಣ, ಕೊಳ್ಳೇಗಾಲ ಪಟ್ಟಣ ಸೇರಿದಂತೆ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆ, ಮೈಸೂರಿನ ನಜರ್‌ಬಾದ್ ಹಾಗೂ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ವಿವಿಧ ಮಾದರಿಯ ಒಟ್ಟು 19 ಮೋಟಾರ್ ಬೈಕ್‌ಗಳನ್ನು ಕಳವು ಮಾಡಿರುವುದಾಗಿ ತಿಳಿದುಬಂದಿದೆ. ಆರೋಪಿಯನ್ನು ಬಂಧಿಸಿ, ಕಳವು ಮಾಡಿದ್ದ ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು ಅವರ ನಿರ್ದೇಶನದಂತೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಂ.ಎನ್. ಶಶಿಧರ್ ಅವರ ಮಾರ್ಗದರ್ಶನದಲ್ಲಿ ಕೊಳ್ಳೇಗಾಲ ಉಪವಿಭಾಗದ ಡಿವೈಎಸ್ಪಿ ಜಿ.ಎನ್. ಮೋಹನ್ ಹಾಗೂ ಯಳಂದೂರು ವೃತ್ತ ನಿರೀಕ್ಷಕ ಸುಬ್ರಮಣ್ಯ ಜಿ.ಕೆ. ಅವರ ನೇತೃತ್ವದಲ್ಲಿ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿತ್ತು. ಯಳಂದೂರು ಠಾಣೆಯ ಪಿಎಸ್‌ಐ ಮಾರುತಿ ಸೇರಿದಂತೆ ಎಎಸ್‌ಐಗಳಾದ ಎಲ್. ರಾಜೀವ್, ಜಿ.ಸಿ. ರಮೇಶ್ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ಕಾರ್ಯಾಚರಣೆಯಲ್ಲಿ ಯಶಸ್ವಿಯಾದ ಪೊಲೀಸ್ ತಂಡದ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು ಅವರು ಶ್ಲಾಘಿಸಿ, ಮುಂದಿನ ದಿನಗಳಲ್ಲಿಯೂ ಅಕ್ರಮ ಚಟುವಟಿಕೆಗಳನ್ನು ಪತ್ತೆಹಚ್ಚಿ ನಿಯಂತ್ರಿಸುವಂತೆ ಸೂಚನೆ ನೀಡಿದ್ದಾರೆ.
ಸಂಬಂಧಿತ ಸುದ್ದಿಗಳು

ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ ನನ್ನ ಭಾಷಣ ಕಟ್! : ಕೃಷ್ಣಬೈರೇಗೌಡ
ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಸಚಿವನಿಗೆ ಮೆಟ್ರೋ ಉದ್ಘಾಟನೆಯಲ್ಲಿ ಮಾತನಾಡಲು ಇಲ್ಲ ಅವಕಾಶ ಎಂದು ತಮ್ಮ ಅಸಮಾಧಾನವನ್ನು ಸಚಿವ ಕೃ…
◷ 12/11/2026
1000 ಕೋಟಿಯತ್ತ ದಾಪುಗಾಲಿಟ್ಟ `ರಾಮಾಯಣ ಭಾಗ1’
ಮುಂಬೈ : ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ನಟಿಸಿರುವ ನಿತೇಶ್ ತಿವಾರಿ ನಿರ್ದೇಶನದ `ರಾಮಾಯಣ’ ಬಾಕ್ಸ್ ಆಫೀಸ್ ಭರ್ಜರಿ…
◷ 12/11/2026
ಹೊಗೆ ಉಗುಳುತ್ತಿರುವ ಕೆಎಸ್ಆರ್ಟಿಸಿ ಬಸ್ : ವಾಯುಮಾಲಿನ್ಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದ ಅಧಿಕಾರಿಗಳು?
ಗುಂಡ್ಲುಪೇಟೆ : ವಾಯುಮಾಲಿನ್ಯ ತಡೆಗಟ್ಟಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೂ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಗು…
◷ 12/11/2026
ನ.15ರಂದು ರಾಜ್ಯದಲ್ಲಿ 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆ ಪೂರ್ವಭಾವಿ ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ನವೆಂಬರ್ 15ರಂದು ರಾಜ್ಯದಲ್ಲಿ 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ನಡೆಯಲಿರುವ ಪೂರ್ವಭಾವಿ ಪರೀಕ್ಷೆಗೆ ಸಂಬಂಧಿ…
◷ 12/11/2026
