ನ.15ರಂದು ರಾಜ್ಯದಲ್ಲಿ 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆ ಪೂರ್ವಭಾವಿ ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನವೆಂಬರ್ 15ರಂದು ರಾಜ್ಯದಲ್ಲಿ 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ನಡೆಯಲಿರುವ ಪೂರ್ವಭಾವಿ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲ ಪರೀಕ್ಷಾ ಸಿಬ್ಬಂದಿಗೆ ಜಿಲ್ಲಾಧಿಕಾರಿಗಳು ಚುನಾವಣೆ ಮಾದರಿಯಲ್ಲಿ ತರಬೇತಿ ನಡೆಸಿ, ವರದಿ ಕೊಡುವಂತೆ ಸಿಎಂ ಡಿ.ಕೆ. ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.ಅವರು ಗೃಹಕಚೇರಿ ಕೃಷ್ಣಾದಲ್ಲಿ ಗುರುವಾರ ಗಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಕೆಪಿಎಸ್ಸಿ ನಡೆಸುತ್ತಿರುವ ಪೂರ್ವಭಾವಿ ಪರೀಕ್ಷೆಗಳ ಸಿದ್ಧತೆಯ ಕುರಿತು ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪರೀಕ್ಷಾ ಸಿದ್ಧತೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ, ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ, ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ನಡೆಸಲು ನಿರ್ದೇಶನ ನೀಡಿದರು. ಪರೀಕ್ಷಾ ಪ್ರಕ್ರಿಯೆಯಲ್ಲಿ ಹಲವಾರು ಸುಧಾರಣೆಗಳನ್ನು ಕೈಗೊಂಡಿದ್ದೇವೆ. ಈ ಬಗ್ಗೆ ಕೆಪಿಎಸ್ಸಿ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾ ಮೂಲಕ ನಿರಂತರ ನಿಗಾ ವಹಿಸಬೇಕು. ಪೊಲೀಸ್ ನೇಮಕಾತಿ ಪರೀಕ್ಷೆಯ ಮಾದರಿಯಲ್ಲಿಯೇ ಸೂಕ್ತ ಭದ್ರತೆ ವ್ಯವಸ್ಥೆ ಕೈಗೊಳ್ಳುವಂತೆ ಇಲಾಖೆಗೆ ಸೂಚಿಸಿದರು. ಪರೀಕ್ಷಾ ಕೇಂದ್ರದ ಆವರಣದಲ್ಲಿ ಯಾವುದೇ ಅನಧಿಕೃತ ವ್ಯಕ್ತಿಯ ಪ್ರವೇಶಕ್ಕೆ ಅವಕಾಶ ಇಲ್ಲ. ಪ್ರವೇಶಕ್ಕೆ ಅನುಮತಿ ಇರುವ ವ್ಯಕ್ತಿಯೂ ಭದ್ರತಾ ತಪಾಸಣೆಗೆ ಒಳಪಡಬೇಕು. ಮಾರ್ಗಸೂಚಿಯನ್ವಯ ಅನುಮತಿಸಿದ ವಸ್ತುಗಳನ್ನು ಮಾತ್ರ ಅವರು ತರಬಹುದು. ಪರೀಕ್ಷಾ ಕೇಂದ್ರದ ಸೂಕ್ಷ್ಮತೆಯನ್ನು ಗುರುತಿಸಿ, ಅದಕ್ಕೆ ತಕ್ಕಂತೆ ಸಿಬ್ಬಂದಿ ನಿಯೋಜನೆ ಮಾಡುವಂತೆ ಸೂಚನೆ ನೀಡಿದರು.ಹೆಚ್ಚುವರಿ ಭದ್ರತಾ ಉಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಪಡೆಯಬಹುದು. ಭದ್ರತೆಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಅಗತ್ಯವಿದ್ದಲ್ಲಿ ಇತರ ಕಡೆಗಳಿಂದ ನಿಯೋಜಿಸಲು ಸೂಚನೆ ನೀಡಿದರು. ಯಾವುದೇ ಕಾರಣಕ್ಕೂ ಅಭ್ಯರ್ಥಿಗಳು ಮೊಬೈಲ್ನೊಂದಿಗೆ ಪರೀಕ್ಷಾ ಕೇಂದ್ರ ಪ್ರವೇಶಿಸುವಂತಿಲ್ಲ. ಅಂತಹ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.ಇದೇ ಮೊದಲ ಬಾರಿಗೆ ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಇಬ್ಬರು ಮೇಲ್ವಿಚಾರಕರ ನಿಯೋಜನೆ ಮಾಡಲಾಗುತ್ತಿದೆ. ಅವರಲ್ಲಿ ಒಬ್ಬರು ಕಡ್ಡಾಯವಾಗಿ ಸರ್ಕಾರಿ ಕಾಲೇಜು ಸಿಬ್ಬಂದಿಯಾಗಿರಬೇಕು ಎಂದು ಸೂಚಿಸಿದರು. ಅಭ್ಯರ್ಥಿಗಳು ಪರೀಕ್ಷಾ ಕೊಠಡಿ ಪರೀಕ್ಷಿಸಿದ ನಂತರ ಮತ್ತೊಮ್ಮೆ ತಪಾಸಣೆ ನಡೆಸುವುದು ಹಾಗೂ ಪರೀಕ್ಷಾ ಕೊಠಡಿಯಲ್ಲಿ ಕಟ್ಟೆಚ್ಚರಿಕೆ ವಹಿಸಲು ಇಬ್ಬರು ಮೇಲ್ವಿಚಾರಕರ ನಿಯೋಜನೆ ಮಾಡಲಾಗುತ್ತಿದೆ. ಖಾಸಗಿ ಅನುದಾನಿತ ಕಾಲೇಜುಗಳಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಅವ್ಯವಹಾರಕ್ಕೆ ಅವಕಾಶ ನೀಡಿರುವುದು ಕಂಡು ಬಂದರೆ ಅಂತಹ ಖಾಸಗಿ ಕಾಲೇಜುಗಳ ಪರವಾನಗಿಯನ್ನು ರದ್ದುಪಡಿಸಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದರು. ಪರೀಕ್ಷಾ ಅಕ್ರಮಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಸಂಬಂಧಿತ ಸುದ್ದಿಗಳು

ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ ನನ್ನ ಭಾಷಣ ಕಟ್! : ಕೃಷ್ಣಬೈರೇಗೌಡ
ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಸಚಿವನಿಗೆ ಮೆಟ್ರೋ ಉದ್ಘಾಟನೆಯಲ್ಲಿ ಮಾತನಾಡಲು ಇಲ್ಲ ಅವಕಾಶ ಎಂದು ತಮ್ಮ ಅಸಮಾಧಾನವನ್ನು ಸಚಿವ ಕೃ…
◷ 12/11/2026
1000 ಕೋಟಿಯತ್ತ ದಾಪುಗಾಲಿಟ್ಟ `ರಾಮಾಯಣ ಭಾಗ1’
ಮುಂಬೈ : ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ನಟಿಸಿರುವ ನಿತೇಶ್ ತಿವಾರಿ ನಿರ್ದೇಶನದ `ರಾಮಾಯಣ’ ಬಾಕ್ಸ್ ಆಫೀಸ್ ಭರ್ಜರಿ…
◷ 12/11/2026
ಹೊಗೆ ಉಗುಳುತ್ತಿರುವ ಕೆಎಸ್ಆರ್ಟಿಸಿ ಬಸ್ : ವಾಯುಮಾಲಿನ್ಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದ ಅಧಿಕಾರಿಗಳು?
ಗುಂಡ್ಲುಪೇಟೆ : ವಾಯುಮಾಲಿನ್ಯ ತಡೆಗಟ್ಟಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೂ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಗು…
◷ 12/11/2026
ಯಳಂದೂರಿನಲ್ಲಿ ಬೈಕ್ ಕಳ್ಳನ ಬಂಧನ : 12 ಲಕ್ಷ ರೂ. ಮೌಲ್ಯದ 19 ಬೈಕ್ ಗಳು ವಶಕ್ಕೆ
ಯಳಂದೂರು : ಮೋಟಾರ್ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಬಂಧಿಸಿರುವ ಯಳಂದೂರು ಪೊಲೀಸರು, ವಿವಿಧ ಕಂಪನಿಗಳ ಒಟ…
◷ 12/11/2026
