ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಸಚಿವನಿಗೆ ಮೆಟ್ರೋ ಉದ್ಘಾಟನೆಯಲ್ಲಿ ಮಾತನಾಡಲು ಇಲ್ಲ ಅವಕಾಶ ಎಂದು ತಮ್ಮ ಅಸಮಾಧಾನವನ್ನು ಸಚಿವ ಕೃಷ್ಣಬೈರೇಗೌಡ ಟ್ವೀಟರ್‌ ನಲ್ಲಿ ಬರೆದುಕೊಳ್ಳುವ ಮೂಲಕ ಹೊರ ಹಾಕಿದ್ದಾರೆ.ಸಭಾ ಕಾರ್ಯಕ್ರಮದ ಡ್ರಾಫ್ಟ್ ನಲ್ಲಿ ನನ್ನ ಮಾತಿಗೆ ಅವಕಾಶ ನಿಗದಿಯಾಗಿತ್ತು. ನಿನ್ನೆ ರಾತ್ರಿ ಬಂದ ಅಂತಿಮ ಪಟ್ಟಿಯಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವರ ಮಾತನ್ನು ಕಟ್ ಮಾಡಲಾಗಿದೆ. ಬಹುತೇಕ ಬಂಡವಾಳ ಖರ್ಚು ನಮ್ಮದು. ಕರ್ನಾಟಕಕ್ಕೆ ನ್ಯಾಯಯುತ ಪಾಲು ಕೇಳಿದರೆ ಈ ರೀತಿ ಶಿಕ್ಷೆ. ಪರವಾಗಿಲ್ಲ, ನೀವು ನನ್ನ ಮಾತನ್ನು ಕಟ್ ಮಾಡಬಹುದು. ಆದರೆ ಬೆಂಗಳೂರಿನ ಅಭಿವೃದ್ಧಿಗೆ ಕೆಲಸ ಮಾಡೋದನ್ನು ನಿಲ್ಲಿಸಲಿಕ್ಕೆ ಆಗೋದಿಲ್ಲ. ಇನ್ನೂ ಹೆಚ್ಚಿನ ಪರಿಶ್ರಮದಿಂದ ಕೆಲಸ ಮಾಡುತ್ತೇವೆ ಎಂದು ಬರೆದುಕೊಂಡಿದ್ದಾರೆ.ಏತನ್ಮಧ್ಯೆ ನಾಳೆ ಸಚಿವ ಕೃಷ್ಣ ಬೈರೇಗೌಡ  ಭಾಷಣ ಮೊಟಕು ವಿಚಾರ ಕುರಿತು ಸಂಸದ ಯದುವೀರ್‌ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿ ಕಾರ್ಯಕ್ರಮದ ಸಮಯ ಮೊದಲೇ ನಿಗದಿಯಾಗುತ್ತದೆ. ಪ್ರಧಾನಿಗಳ ಕಾರ್ಯಕ್ರಮ ಹಿನ್ನಲೆ ಪ್ರೋಟೋಕಾಲ್ ಪ್ರಕಾರ ಎಲ್ಲವೂ ಆಗತ್ತೆ. ಬೇಕಂತಲೇ ಭಾಷಣ ಮೊಟಕು ಮಾಡಿರುವುದಿಲ್ಲ, ನನ್ನ ಭಾಷಣವೂ ಇತ್ತು, ಅದನ್ನು ಕ್ಯಾನ್ಸಲ್‌ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.