ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ ಮಾಡಲು ಮೈಸೂರಿನ ಲಲಿತ ಮಹಲ್ ಹ್ಯಾಲಿಪ್ಯಾಡ್ ಗೆ ಆಗಮಿಸಿದ ಸಂದರ್ಭದಲ್ಲಿ   ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೂಗುಚ್ಛ ನೀಡುವುದರ ಮೂಲಕ‌ ಸ್ವಾಗತ ಕೋರಿದರು.ರಾಜ್ಯಪಾಲರಾದ ಡಾ.ಸುಧಾ ಯಾದವ್, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಡಾ. ಲಕ್ಷ್ಮಿಕಾಂತ ರೆಡ್ಡಿ ಜಿ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.