ರಾಮನಗರ : ದೇವಾಲಯಕ್ಕೆ ಪ್ರವೇಶ ನಿರಾಕರಿಸಿ ಬೀಗ ಹಾಕಿರುವುದು ಒಳ್ಳೆಯ ಬೆಳವಣಿಗೆಯಲ್ಲ, ಇದನ್ನು ಯಾರೂ ಒಪ್ಪುವುದಿಲ್ಲ. ದೇವಸ್ಥಾನ ಯಾರೋ ಒಬ್ಬರ ಸ್ವತ್ತಲ್ಲ, ಅದು ಇಡೀ ಸಮಾಜದ ಸ್ವತ್ತು   ಎಂದು ಸಚಿವ ಹೆಚ್.ಸಿ. ಬಾಲಕೃಷ್ಣ   ತಿಳಿಸಿದ್ದಾರೆ.ರಾಮನಗರದ ಕೂಟಗಲ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾರೋಹಳ್ಳಿ ತಾಲೂಕಿನ ದೊಡ್ಡಕುರುಬರಹಳ್ಳಿಯಲ್ಲಿ ನಿಖಿಲ್ ಕುಮಾರಸ್ವಾಮಿಗೆ ದೇವಾಲಯ ಪ್ರವೇಶ ನಿರಾಕರಿಸಿ ಕಾಂಗ್ರೆಸ್   ಕಾರ್ಯಕರ್ತರು ಬೀಗ ಹಾಕಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು  ದೇವಸ್ಥಾನಕ್ಕೆ ಎಲ್ಲರಿಗೂ ಪ್ರವೇಶದ ಅವಕಾಶ ಕೊಡಬೇಕು. ಯಾರೋ ಒಬ್ಬ ಕಿಡಿಗೇಡಿ ಈ ಕೃತ್ಯ ಮಾಡಿದ್ದಾನೆ ಎಂಬ ಮಾಹಿತಿ ಇದೆ. ಈ ಘಟನೆ ಖಂಡನೀಯ ಎಂದು ಈಗಾಗಲೇ ನಮ್ಮ ಶಾಸಕರೂ ಹೇಳಿದ್ದಾರೆ. ರಾಜ್ಯದಲ್ಲಿ ಎಲ್ಲೂ ಕೂಡ ಇಂತಹ ಘಟನೆಗಳು ಮರುಕಳಿಸಬಾರದು ಎಂದು ಹೇಳಿದರು.