ಇಬ್ಬರು ಬಾಂಗ್ಲಾ ಪ್ರಜೆಗಳು ವಶಕ್ಕೆ

ಮಂಗಳೂರು : ಯಾವುದೇ ಅಧಿಕೃತ ದಾಖಲಾತಿಗಳಿಲ್ಲದೆ ಭಾರತಕ್ಕೆ ಅಕ್ರಮವಾಗಿ ನುಸುಳಿ ಮಂಗಳೂರಿನಲ್ಲಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪಣಂಬೂರು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.ಪಣಂಬೂರು ಬೀಚ್ ಹತ್ತಿರದ ರೆಸ್ಟೋರೆಂಟ್ನಲ್ಲಿ ಇಬ್ಬರು ಬಾಂಗ್ಲಾದೇಶದ ಪ್ರಜೆಗಳು ಕೆಲಸ ಮಾಡುತ್ತಿರುವ ಬಗ್ಗೆ ಪಣಂಬೂರು ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಅವರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಆಧಾರದ ಮೇಲೆ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸದರಿ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ವೇಳೆ ಇಬ್ಬರೂ ಯಾವುದೇ ಅಧಿಕೃತ ದಾಖಲಾತಿಗಳಿಲ್ಲದೆ (ಪಾಸ್ಪೋರ್ಟ್ ಅಥವಾ ವೀಸಾ) ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವುದು ಪತ್ತೆಯಾಗಿದೆ.ಪಣಂಬೂರು ಠಾಣಾ ಪೊಲೀಸ್ ಇನ್ಸಪೆಕ್ಟರ್ ಸಲೀಂ ಅಬ್ಬಾಸ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಪಿಎಸ್ ಐಗಳಾದ ಶ್ರೀಕಲಾ ಕೆ.ಟಿ. ಮತ್ತು ಜ್ಞಾನಶೇಖರ ಹಾಗೂ ಪೊಲೀಸ್ ಸಿಬ್ಬಂದಿ ಇಮ್ತಿಯಾಝ್ ಫಕ್ಕಿರೇಶ್ ಮತ್ತು ರಾಕೇಶ್ ಎಲ್.ಎಂ. ಪಾಲ್ಗೊಂಡಿದ್ದರು.
ಸಂಬಂಧಿತ ಸುದ್ದಿಗಳು

ಅಂಡರ್-19 ಏಷ್ಯಾ ಕಪ್ ಗೆದ್ದ ಭಾರತ: ರೋಚಕ ಪಂದ್ಯದಲ್ಲಿ ಪಾಕಿಸ್ತಾನ ಮಣಿಸಿದ ಯುವ ಪಡೆ, ಪ್ರಧಾನಿ ಮೋದಿ ಅಭಿನಂದನೆ
ಮಸ್ಕತ್ : ಒಮಾನ್ನ ಮಸ್ಕತ್ನಲ್ಲಿ ನಡೆದ ಪುರುಷರ ಅಂಡರ್-19 ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ…
◷ 15/11/2026
ಜನ್ಜಾತಿಯ ಗೌರವ್ ದಿವಸ್ ಈಗ ರಾಷ್ಟ್ರೀಯ ಉತ್ಸವವಾಗಿದೆ : ಪ್ರಧಾನಿ ಮೋದಿ
ನವದೆಹಲಿ: 2021ರ ನವೆಂಬರ್ 15ರಂದು ಮೊದಲ ಬಾರಿಗೆ ಆಚರಿಸಲಾದ 'ಜನ್ಜಾತಿಯ ಗೌರವ್ ದಿವಸ್' (ಬುಡಕಟ್ಟು ಹೆಮ್ಮೆಯ ದಿನ) ಈಗ ಇಡೀ ದೇಶದ …
◷ 15/11/2026
ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ ಕೇವಲ ಆರ್ಥಿಕ ಗುರಿಯಲ್ಲ, ಕಾರ್ಯತಂತ್ರದ ಅಗತ್ಯ : ರಕ್ಷಣಾ ಸಚಿವ ರಾಜನಾಥ್ ಸಿಂಗ್
ನವದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ (ಆತ್ಮನಿರ್ಭರತೆ) ಎಂಬುದು ಕೇವಲ ಆರ್ಥಿಕ ಗುರಿಯಷ್ಟೇ ಅಲ್ಲ, ಬದಲಿಗೆ ದೇಶದ ಪ್ರಮುಖ ಕ…
◷ 15/11/2026
ನೂತನ ಪೊಲೀಸ್ ಆಯುಕ್ತರಾಗಿ ಎನ್. ವಿಷ್ಣುವರ್ಧನ್ ಅಧಿಕಾರ ಸ್ವೀಕಾರ
ಮೈಸೂರು : ಮೈಸೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಎನ್. ವಿಷ್ಣುವರ್ಧನ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.…
◷ 14/11/2026
