ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ಬೆಂಗಳೂರಿನಲ್ಲಿ ಇಂದು ಹಮ್ಮಿಕೊಂಡಿದ್ದ 73ನೇ ಸಹಕಾರ ಸಪ್ತಾಹ – 2026ರ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ ಸಹಕಾರ ರತ್ನ ಪ್ರಶಸ್ತಿಗಳನ್ನು ಸಿಎಂ ಡಿ.ಕೆ.ಶಿವಕುಮಾರ್ ಪ್ರದಾನ ಮಾಡಿದರು.ಈ ಸಂದರ್ಭದಲ್ಲಿ ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸವದಿ, ಕರ್ನಾಟಕ ಸಹಕಾರ ಮಹಾಮಂಡಳದ ಅಧ್ಯಕ್ಷ  ಹಾಗೂ ಶಾಸಕ ಜಿ.ಟಿ. ದೇವೇಗೌಡ, ಕರ್ನಾಟಕ ಸಹಕಾರ ವಸತಿ ಮಹಾಮಂಡಳದ ಅಧ್ಯಕ್ಷ  ಹಾಗೂ ಶಾಸಕ ಎಸ್.ಟಿ. ಸೋಮಶೇಖರ್, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಎಸ್. ರವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.