ಮೈಸೂರು : ಮೈಸೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಎನ್. ವಿಷ್ಣುವರ್ಧನ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇಂದು ಎನ್. ವಿಷ್ಣುವರ್ಧನ್ ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದಾರೆ.ಇವರು ಇಲ್ಲಿಯವರೆಗೆ ನಗರದ ಕರ್ನಾಟಕ ಪೊಲೀಸ್ ಅಕಾಡೆಮಿಯ (KPA) ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. 2024ರ ಜುಲೈ 5ರಿಂದ ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಸೀಮಾ ಲಾಟ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಎನ್. ವಿಷ್ಣುವರ್ಧನ್ ಅವರನ್ನು ನಿಯೋಜಿಸಲಾಗಿತ್ತು.