ರೂ. 8,295 ಕೋಟಿ ವೆಚ್ಚದ ಕಡಲ ಯೋಜನೆಗಳ ಹೂಡಿಕೆದಾರರ ಕೈಪಿಡಿ ಬಿಡುಗಡೆ

ಬೆಂಗಳೂರು : ಕರ್ನಾಟಕದ ಕಡಲ ಮೂಲಸೌಕರ್ಯವನ್ನು ಬಲಪಡಿಸುವ ಮತ್ತು ಹೂಡಿಕೆ ಅವಕಾಶಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ, 7ನೇ ಕರ್ನಾಟಕ ರಾಜ್ಯ ಕಡಲ ಮತ್ತು ಜಲಮಾರ್ಗ ಸಾರಿಗೆ ಸಮಿತಿ ಸಭೆಯು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸೋಮವಾರ ಜರುಗಿತು.ಸಭೆಯಲ್ಲಿ ಸಚಿವ ಸಂಪುಟದ ಅನುಮೋದನೆ ಪಡೆದಿರುವ ಹಾಗೂ ಒಟ್ಟು ರೂ. 8,295 ಕೋಟಿ ಮೌಲ್ಯದ ಎಂಟು ಕಡಲ ಪಿಪಿಪಿ ಯೋಜನೆಗಳ ಹೂಡಿಕೆದಾರರ ಕೈಪಿಡಿ ಮತ್ತು ಮಾರುಕಟ್ಟೆ ಸಾಮಗ್ರಿಗಳನ್ನು ಗಣ್ಯರು ಬಿಡುಗಡೆ ಮಾಡಿದರು. ರಾಜ್ಯದ ಕಡಲ ಸಾಮರ್ಥ್ಯವನ್ನು ಆರ್ಥಿಕ ಅವಕಾಶಗಳಾಗಿ ಪರಿವರ್ತಿಸಲು ಸರ್ಕಾರ ಬದ್ಧವಾಗಿದ್ದು, ಈ ಯೋಜನೆಗಳ ಟೆಂಡರ್ ಗಳನ್ನು ಶೀಘ್ರದಲ್ಲೇ ಕರೆಯಲಾಗುವುದು. ಈ ಕೈಪಿಡಿಯು ದೇಶೀಯ ಹಾಗೂ ಜಾಗತಿಕ ಹೂಡಿಕೆದಾರರಿಗೆ ಕರ್ನಾಟಕದ ಕಡಲ ವಲಯದ ಸಮಗ್ರ ಚಿತ್ರಣವನ್ನು ನೀಡಲಿದ್ದು, ಕರಾವಳಿ ಪ್ರದೇಶದ ಆರ್ಥಿಕ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಹಾಗೂ ನೀಲಿ ಆರ್ಥಿಕತೆಗೆ (ಬ್ಲೂ ಎಕಾನಮಿ) ಇದು ಮಹತ್ವದ ಕೊಡುಗೆ ನೀಡುವ ನಿರೀಕ್ಷೆಯಿದೆ.ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ವಿಶಾಲ್ ಆರ್., ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಸಿ. ಬಾಲಚಂದ್ರ ಹಾಗೂ ನಿರ್ದೇಶಕ ಕ್ಯಾಪ್ಟನ್ ಸಂಜಯ್ ಟಿ. ಉಗಲ್ಮುಗಲೆ ಉಪಸ್ಥಿತರಿದ್ದರು.
ಸಂಬಂಧಿತ ಸುದ್ದಿಗಳು

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ನೇಮಕವಾದ ನರಸಿಂಹರಾಜುಗೆ ಅಭಿನಂದನೆ
ವಿನಯ್ ದೊಡ್ಡಕೊಪ್ಪಲುಕೆ.ಆರ್.ನಗರ: ಮೈಸೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ರಾಜ್ಯ ಸರ್ಕಾರದಿಂದ…
◷ 17/11/2026
‘ಬೇಡ್ತಿ-ವರದಾ ನದಿ ಜೋಡಣೆ ಯೋಜನೆ’ಯ ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು: ‘ಬೇಡ್ತಿ-ವರದಾ ನದಿ ಜೋಡಣೆ ಯೋಜನೆ’ಯ ಪ್ರಗತಿ ಪರಿಶೀಲನಾ ಸಭೆಯನ್ನು ಇಂದು ಬೆಂಗಳೂರಿನ ಕೆಬಿಜೆಎನ್ಎಲ್ ಕೇಂದ್ರ ಕಚೇರಿಯಲ್…
◷ 17/11/2026
ಅರ್ಜುನ ಸ್ಮಾರಕಕ್ಕೆ ನಿರಾಕ್ಷೇಪಣಾ ಪತ್ರ : ಸಮಾಲೋಚನೆ
ಮೈಸೂರು : ಮೈಸೂರಿನ ನರಸಿಂಹರಾಜ ಕ್ಷೇತ್ರ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳಲಿರುವ ಅರ್ಜುನ ಸ್ಮಾರಕಕ್ಕೆ ನಿರಾಕ್ಷೇಪಣಾ ಪತ್ರ (NOC) ದೊ…
◷ 17/11/2026
ಮಹಿಳೆಯರಿಗೆ ನಿಜವಾದ ಪಾಲುದಾರಿಕೆ ದೊರೆಯಬೇಕು : ಡಿಸಿಎಂ ಡಾ.ಜಿ.ಪರಮೇಶ್ವರ್
ಬೆಂಗಳೂರು: ಇಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾಮನ್ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತ ಪ್ರಾದೇಶಿಕ ವ…
◷ 17/11/2026
