ನ.27 ರಂದು ವಿಜೃಂಭಣೆಯಿಂದ ಕನಕದಾಸ ಜಯಂತಿ ಆಚರಣೆ : ಆರ್ ಐಶ್ವರ್ಯ

ಮೈಸೂರು : ಜಿಲ್ಲಾಡಳಿತದ ವತಿಯಿಂದ ನವೆಂಬರ್ 27 ರಂದು ವಿಜೃಂಭಣೆಯಿಂದ ಕನಕ ಜಯಂತಿಯನ್ನು ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದರು.ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಯಂತಿ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನಕದಾಸರು ಸಮಾಜದ ಅಸ್ಮಿತೆ. ಅವರು ರಚಿಸಿರುವ ಕೀರ್ತನೆಗಳು ಸಮಾಜಕ್ಕೆ ಉದತ್ತವಾದ ನೈತಿಕ ಸಂದೇಶ ನೀಡಿದೆ ಎಂದರು.ಸಂತಶ್ರೇಷ್ಠ ಕನಕದಾಸರ ಜಯಂತಿ ಆಚರಣೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದ್ದು, ಯಾವುದೇ ಲೋಪ ಉಂಟಾಗದಂತೆ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದರು.ಮೆರವಣಿಗೆ ನವೆಂಬರ್ 27 ರಂದು ಬೆಳಗ್ಗೆ ಕೋಟೆ ಅಂಜುನೇಯಸ್ವಾಮಿ ದೇವಸ್ಥಾನದ ಆವರಣದಿಂದ ಕನಕದಾಸರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಮೆರವಣಿಗೆಯು ಕೆ.ಆರ್.ವೃತ್ತ, ಡಿ.ದೇವರಾಜ ಅರಸ್ ರಸ್ತೆ, ಮೆಟ್ರಪೋಲ್ ವೃತ್ತದಿಂದ ಕಲಾಮಂದಿರ ತಲುಪಲಿದೆ ಎಂದರು. ಮೆರವಣಿಗೆ ಸಾಗುವ ರಸ್ತೆಯ ಮುಖ್ಯ ವೃತ್ತಗಳಲ್ಲಿ ತಳಿರು ತೋರಣದಿಂದ ಸಿಂಗಾರ ಮಾಡಬೇಕು, ಮೆರವಣಿಗೆಯಲ್ಲಿ ಭಾಗವಹಿಸುವವರಿಗೆ ಕುಡಿಯುವ ನೀರು, ಮೆತವಣಿಗೆ ಪ್ರಾರಂಭವಾಗುವ ಕೋಟೆ ಅಂಜುನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶ್ಯಾಮಿಯಾನದ ವ್ಯವಸ್ಥೆ ಮಾಡುವಂತೆ ತಿಳಿಸಿದರು.ವೇದಿಕೆ ಕಾರ್ಯಕ್ರಮ ನವೆಂಬರ್ 27.ರಂದು ಮೆರವಣಿಗೆ ಕಲಾಮಂದಿರ ತಲುಪಿದ ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಗೀತಾ ಗಾಯನ ಏರ್ಪಡಿಸಲಾಗುವುದು. ಕನಕದಾಸರ ತತ್ವ, ಆದರ್ಶಗಳು ಮತ್ತು ಸಾಮಾಜಿಕ ಸಂದೇಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.ಪುತ್ಥಳಿ ನಿರ್ಮಾಣ ಕನಕದಾಸ ಜಯಂತೋತ್ಸವ ಸಮಿತಿಯ ಸದಸ್ಯರುಗಳು ಕನಕದಾಸರ ಪುತ್ಥಳಿ ನಿರ್ಮಾಣಕ್ಕೆ ಕುಪ್ಪಣ ಪಾಕ್೯ ಹಾಗೂ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಸ್ಥಳ ಗುರುತಿಸಲಾಗಿದ್ದು, ಪುತ್ಥಳಿ ನಿರ್ಮಾಣದ ಕೆಲಸದ ಸ್ಥಳ ಗುರುತಿಸುವಿಕೆ ಹಾಗೂ ನಿರ್ಮಾಣ ಕೆಲಸವನ್ನು ಚುರುಕುಗೊಳಿಸುವಂತೆ ಮನವಿ ಮಾಡಿದರು.ಸಭೆಯಲ್ಲಿ ಸಂತ ಕನಕದಾಸ ಜಯಂತೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಸಂಚಾಲಕರಾದ ಎಂ.ಶಿವಣ್ಣ, ಮಾಜಿ ಅಧ್ಯಕ್ಷ ಬಿ.ಎಂ ರಾಮು, ಪ್ರಧಾನ ಕಾರ್ಯದರ್ಶಿ ಸಿದ್ದನಗೇಂದ್ರ, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಎಂ.ಡಿ ಸುದರ್ಶನ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಉದಯ್ ಕುಮಾರ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಸಂಬಂಧಿತ ಸುದ್ದಿಗಳು

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ನೇಮಕವಾದ ನರಸಿಂಹರಾಜುಗೆ ಅಭಿನಂದನೆ
ವಿನಯ್ ದೊಡ್ಡಕೊಪ್ಪಲುಕೆ.ಆರ್.ನಗರ: ಮೈಸೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ರಾಜ್ಯ ಸರ್ಕಾರದಿಂದ…
◷ 17/11/2026
‘ಬೇಡ್ತಿ-ವರದಾ ನದಿ ಜೋಡಣೆ ಯೋಜನೆ’ಯ ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು: ‘ಬೇಡ್ತಿ-ವರದಾ ನದಿ ಜೋಡಣೆ ಯೋಜನೆ’ಯ ಪ್ರಗತಿ ಪರಿಶೀಲನಾ ಸಭೆಯನ್ನು ಇಂದು ಬೆಂಗಳೂರಿನ ಕೆಬಿಜೆಎನ್ಎಲ್ ಕೇಂದ್ರ ಕಚೇರಿಯಲ್…
◷ 17/11/2026
ಅರ್ಜುನ ಸ್ಮಾರಕಕ್ಕೆ ನಿರಾಕ್ಷೇಪಣಾ ಪತ್ರ : ಸಮಾಲೋಚನೆ
ಮೈಸೂರು : ಮೈಸೂರಿನ ನರಸಿಂಹರಾಜ ಕ್ಷೇತ್ರ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳಲಿರುವ ಅರ್ಜುನ ಸ್ಮಾರಕಕ್ಕೆ ನಿರಾಕ್ಷೇಪಣಾ ಪತ್ರ (NOC) ದೊ…
◷ 17/11/2026
ಮಹಿಳೆಯರಿಗೆ ನಿಜವಾದ ಪಾಲುದಾರಿಕೆ ದೊರೆಯಬೇಕು : ಡಿಸಿಎಂ ಡಾ.ಜಿ.ಪರಮೇಶ್ವರ್
ಬೆಂಗಳೂರು: ಇಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾಮನ್ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತ ಪ್ರಾದೇಶಿಕ ವ…
◷ 17/11/2026
