ನ.7ರಿಂದ 11ರ ವರೆಗೆ ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸವ
ರಕ್ಷಣಾ ತಂಡಗಳಿಂದ ಮಾಕ್ ಡ್ರಿಲ್

ಚಿಕ್ಕಮಗಳೂರು : ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸವ ನ.7ರಿಂದ 11ರ ವರೆಗೆ ನಡೆಯಲಿದೆ. ಈ ಹಿನ್ನೆಲೆ ಭಕ್ತರ ಸುರಕ್ಷತಾ ದೃಷ್ಟಿಯಿಂದ ರಕ್ಷಣಾ ತಂಡಗಳು ಮಾಕ್ ಡ್ರಿಲ್ ನಡೆಸಿವೆ.ಭಕ್ತರ ಅನುಕೂಲಕ್ಕಾಗಿ ಜಿಲ್ಲಾಡಳಿತ, ಪೊಲೀಸ್, ಅಗ್ನಿಶಾಮಕ, ಕಂದಾಯ, ಮುಜರಾಯಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿ ದೇವಿರಮ್ಮನ ಬೆಟ್ಟ ಹತ್ತುವ ಮಾರ್ಗದಲ್ಲಿ ಮಾಕ್ ಡ್ರಿಲ್ ನಡೆಸಿದ್ದು, ಈ ಮೂಲಕ ತುರ್ತು ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಮಾಹಿತಿ ನೀಡಿದ್ದಾರೆ. ಪ್ರತಿವರ್ಷದಂತೆ ಈ ವರ್ಷವೂ ಸಾವಿರಾರು ಭಕ್ತರು ಬೆಟ್ಟ ಹತ್ತುವ ನಿರೀಕ್ಷೆ ಇರುವುದರಿಂದ, ಯಾವುದೇ ಅವಘಡ ಸಂಭವಿಸದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.ಬಿಂಡಿಗಾ–ಮಲ್ಲೇನಹಳ್ಳಿ ಬಳಿಯ ದೇವಿರಮ್ಮ ಬೆಟ್ಟಕ್ಕೆ ಜಿಲ್ಲಾಧಿಕಾರಿಗಳು, ಪೊಲೀಸ್ ಅಧೀಕ್ಷಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬೆಟ್ಟದ ಮಾರ್ಗ, ಭದ್ರತೆ, ಸಂಚಾರ ವ್ಯವಸ್ಥೆ, ಆರೋಗ್ಯ ಹಾಗೂ ತುರ್ತು ಸೇವೆಗಳ ಸಿದ್ಧತೆಗಳ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ. ಈ ಸೂಚನೆ ಮೇರೆಗೆ ಅಗ್ನಿಶಾಮಕ ದಳದಿಂದ ಮಾಕ್ ಡ್ರಿಲ್ ನಡೆಸಲಾಗಿದೆ.ಬೆಟ್ಟದಲ್ಲಿ ಗಾಯಗೊಂಡವರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಪ್ರದರ್ಶಿಸುವ ಮೂಲಕ, ತುರ್ತು ಸಂದರ್ಭಗಳನ್ನು ಎದುರಿಸಲು ಇರುವ ಸಿದ್ಧತೆಯನ್ನು ಜಿಲ್ಲಾಧಿಕಾರಿಗಳ ಮುಂದೆ ಪ್ರದರ್ಶಿಸಿದ್ದಾರೆ. ಇದೇ ವೇಳೆ, ಭಕ್ತಾದಿಗಳು ಪೊಲೀಸರು ಮತ್ತು ಅಧಿಕಾರಿಗಳ ಸೂಚನೆಗಳನ್ನು ಪಾಲಿಸಿ, ಶಿಸ್ತು ಹಾಗೂ ಸುರಕ್ಷಿತವಾಗಿ ಜಾತ್ರೆಯಲ್ಲಿ ಪಾಲ್ಗೊಳ್ಳಬೇಕೆಂದು ಜಿಲ್ಲಾಡಳಿತ ಭಕ್ತರಲ್ಲಿ ಮನವಿ ಮಾಡಿದೆ.
ಸಂಬಂಧಿತ ಸುದ್ದಿಗಳು

ಬಳ್ಳೂರು ಟಿಪ್ಪರ್ ಅಪಘಾತ: ಮೂಡ್ಲಕಟ್ಟೆ ಕಾಲೇಜಿನ ವಿದ್ಯಾರ್ಥಿ ಶಾಯನ್ ಚಿಕಿತ್ಸೆ ಫಲಿಸದೆ ಸಾವು
ಮೂವರು ಆರೋಪಿಗಳ ಬಂಧನ
◷ 03/11/2026
ಸ್ಟಿಂಗ್ ಆಪರೇಷನ್ ಪ್ರಕರಣ ಇಡೀ ಕರ್ನಾಟಕಕ್ಕೆ ದೊಡ್ಡ ಕಳಂಕ : ಕೆ.ಎನ್.ರಾಜಣ್ಣ ಬೇಸರ
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣ ಇಡೀ ಕರ್ನಾಟಕಕ್ಕೆ ದೊಡ್ಡ ಕಳಂಕ ತಂದಿಟ್ಟ…
◷ 03/11/2026
ನ.13ರಂದು ಮೆಟ್ರೋ ಪಿಂಕ್ ಮಾರ್ಗ ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಬೆಂಗಳೂರು : ಇದೇ ನವೆಂಬರ್ 13 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮೆಟ್ರೋ ಪಿಂಕ್ ಮಾರ್ಗವನ್ನು ಉದ್ಘಾಟಿಸಲಿದ್ದಾರೆ.ಈ ಕುರಿತು ಸ…
◷ 03/11/2026
ಶೂಟಿಂಗ್ : ಪುರುಷರ 50 ಮೀ. ಪಿಸ್ತೂಲ್ ವಿಭಾಗದಲ್ಲಿ ಭಾರತಕ್ಕೆ ಚಿನ್ನದ ಪದಕ!
ನವದೆಹಲಿ : ದೋಹಾದಲ್ಲಿ ನಡೆಯುತ್ತಿರುವ ಐಎಸ್ಎಸ್ಎಫ್ (ISSF) ವಿಶ್ವ ಶೂಟಿಂಗ್ ಚಾಂಪಿಯನ್ ಷಿಪ್ ನ ಪುರುಷರ 50 ಮೀಟರ್ ಪಿಸ್ತೂಲ್ …
◷ 03/11/2026
