ಬೆಂಗಳೂರು: ‘ಬೇಡ್ತಿ-ವರದಾ ನದಿ ಜೋಡಣೆ ಯೋಜನೆ’ಯ ಪ್ರಗತಿ ಪರಿಶೀಲನಾ ಸಭೆಯನ್ನು ಇಂದು ಬೆಂಗಳೂರಿನ ಕೆಬಿಜೆಎನ್‌ಎಲ್ ಕೇಂದ್ರ ಕಚೇರಿಯಲ್ಲಿ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವ ಚಲುವರಾಯಸ್ವಾಮಿ ನಡೆಸಿದರು.ಅಂದಾಜು ₹9,652.73 ಕೋಟಿ ವೆಚ್ಚದ ಈ ಯೋಜನೆಯಿಂದ ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ 70,053 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಹಾಗೂ 20.21 ಲಕ್ಷ ಜನರಿಗೆ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ. ಅರಣ್ಯ ಇಲಾಖೆಯ ಅನುಮತಿಗಳನ್ನು ಶೀಘ್ರವಾಗಿ ಪಡೆದು, ನಿಗದಿತ ಕಾಲಮಿತಿಯೊಳಗೆ ವಿಸ್ತೃತ ಯೋಜನಾ ವರದಿಯನ್ನು (DPR) ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.