ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರ ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸೇರಿದಂತೆ ಒಟ್ಟು 32 ಹಿರಿಯ ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಪುನರ್ ರಚಿಸಲಾಗಿದ್ದು, ಹೊಸದಾಗಿ ಸೃಷ್ಟಿಸಲಾದ ವಲಯ ಆಯುಕ್ತರ ಹುದ್ದೆಗಳಿಗೂ ಅಧಿಕಾರಿಗಳನ್ನು ನೇಮಿಸಲಾಗಿದೆ. ಅದರಲ್ಲೂ ಮುಖ್ಯವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಸೀಮಂತ್ ಕುಮಾರ್ ಸಿಂಗ್ ಅವರನ್ನು ಸಹ ವರ್ಗಾವಣೆ ಮಾಡಲಾಗಿದ್ದು, ಆರ್. ಹಿತೇಂದ್ರ ಅವರನ್ನು ನೂತನ ಕಮಿಷನರ್ ಆಗಿ ನೇಮಕ ಮಾಡಲಾಗಿದೆ.ಆರ್ ಸಿಬಿ ವಿಜಯೋತ್ಸವ ಕಾಲ್ತುಳಿತ ದುರಂತದ ನಂತರ, ಬೆಂಗಳೂರಿನ ಪೊಲೀಸ್ ಕಮೀಷನರ್ ಆಗಿದ್ದ ಬಿ.ದಯಾನಂದ್ ಅವರನ್ನು ರಾಜ್ಯ ಸರ್ಕಾರ ಸಸ್ಪೆಂಡ್ ಮಾಡಿತ್ತು. ಈ ಹುದ್ದಗೆ ಬೆಂಗಳೂರು ಮಹಾನಗರ ಕಾರ್ಯಪಡೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ 1996ರ ಕರ್ನಾಟಕ ಕೆಡರ್ ನ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಬೆಂಗಳೂರು ಕಮಿಷನರ್ ಆಗಿ ನೇಮಕ ಮಾಡಲಾಗಿತ್ತು. ಇದೀಗ ಸೀಮಂತ್ ಕುಮಾರ್ ಅವರನ್ನು ಅಗ್ನಿಶಾಮಕ ದಳ ಎಡಿಜಿಪಿಯಾಗಿ ವರ್ಗಾವಣೆ ಮಾಡಿದ್ದು, ಕಾನೂನು ಸುವ್ಯವಸ್ಥೆ ಎಡಿಜಿಪಿಯಾಗಿದ್ದ ಆರ್. ಹಿತೇಂದ್ರ ಅವರನ್ನು ಹೊಸ ಕಮಿಷನರ್ ಆಗಿ ನೇಮಿಸಲಾಗಿದೆ.
ಸಂಬಂಧಿತ ಸುದ್ದಿಗಳು

ಡಿ.12ರಂದು ಲೋಕ ಅದಾಲತ್ ಕಾರ್ಯಕ್ರಮ
ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮೈಸೂರು ವತಿಯಿಂದ ಡಿ.12ರಂದ…
◷ 19/11/2026
ಭಕ್ತ ಕನಕದಾಸರ ಜಯಂತಿ : ಅಗತ್ಯ ಸಿದ್ದತೆಗೆ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಸೂಚನೆ
ಬಳ್ಳಾರಿ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ, ಜಿಲ್ಲಾ ಕೇಂದ್ರದಲ್ಲಿ ನ. 27 ರಂದು ಸಂತ ಶ್…
◷ 19/11/2026
ಆಶಾ ಕಾರ್ಯಕರ್ತೆಯರ ಸಭೆ ನಡೆಸಿ ಸಮಸ್ಯೆ ಆಲಿಸಿದ ಸಿಎಂ
ಬೆಂಗಳೂರು : ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಶಾ…
◷ 19/11/2026
ಎಂ.ಕೆ ಮಲ್ಲೇಶ್ ಗೆ ಅಭಿನಂದನೆ
ಮೈಸೂರು : ಸರ್ಕಾರದ ಆದೇಶದಂತೆ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಇಲ್ಲಿನ ಸಂಶೋಧನಾಧಿಕಾರಿಯಾಗಿ ಇಂದು ಕಾರ್ಯ ವರದಿ ಮಾಡಿಕೊ…
◷ 19/11/2026
