ಬೆಂಗಳೂರು:  ಕೇಂದ್ರ ಸಚಿವರಾದ   ಕುಮಾರಸ್ವಾಮಿಯವರು ರಾಜ್ಯದ ಕೈಗಾರಿಕಾ ವಾತಾವರಣಕ್ಕೆ ಧಕ್ಕೆಯಾಗುವಂತಹ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದರು.ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು  ಹೋಂಡಾ ಕಂಪನಿಯ ಪ್ರತಿನಿಧಿಗಳು ತಮ್ಮನ್ನು ಭೇಟಿಯಾಗಿ, ಕರ್ನಾಟಕವನ್ನು ತೊರೆಯುವುದಾಗಿ ತಿಳಿಸಿದ್ದಾರೆ ಎಂದು ಅವರು ಹೇಳಿಕೆ ನೀಡಿದ್ದಾರೆ. ಆದರೆ, ಹೋಂಡಾ ಕಂಪನಿಯ ಪ್ರತಿನಿಧಿಗಳು ನನ್ನನ್ನು ಭೇಟಿಯಾದ ಸಂದರ್ಭದಲ್ಲಿ, ತಾವು ಕುಮಾರಸ್ವಾಮಿಯವರನ್ನು ಭೇಟಿಯೇ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಷ್ಟೇ ಅಲ್ಲದೆ, ರಾಜ್ಯ ಸರ್ಕಾರ, ವಿಶೇಷವಾಗಿ ಕೈಗಾರಿಕಾ ಇಲಾಖೆಯಿಂದ ದೊರೆಯುತ್ತಿರುವ ಸಹಕಾರ ಮತ್ತು ಬೆಂಬಲದ ಬಗ್ಗೆ ಕಂಪನಿಯ ಪ್ರತಿನಿಧಿಗಳು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.ಕುಮಾರ ಸ್ವಾಮಿ ಅವರು ರಾಜ್ಯದ ಕೈಗಾರಿಕಾ ಪ್ರಗತಿಗೆ ಪೂರಕವಾಗಿ ಕೇಂದ್ರದಿಂದ ಹೆಚ್ಚಿನ ಸಹಕಾರ ಒದಗಿಸುವತ್ತ ಗಮನಹರಿಸಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ತಿಳಿಸಿದರು.