ಚಾಮರಾಜನಗರ :  ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿನ ಬಂಡಳ್ಳಿ-ತೆಳ್ಳನೂರು ಒಂಟಿ ಸಲಗವೊಂದು ಸಾವನ್ನಪ್ಪಿದ ಘಟನೆ ನಡೆದಿದೆ.ಅರಣ್ಯ ಸ್ವಾಗತ ಕಮಾನು ಸಮೀಪ ಘಟನೆ ನಡೆದಿದ್ದು,  ಗಂಡಾನೆಗೆ ಸುಮಾರು 35 ವರ್ಷವಿರಬಹುದೆಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆದಿದೆ. ಪ್ರಾಥಮಿಕ ಪರಿಶೀಲನೆ ವೇಳೆ ಸ್ವಾಭಾವಿಕವಾಗಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭಿಸಿದ್ದು,ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ.