ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಇಂದು ಆಯೋಜಿಸಿದ್ದ ಮಾಜಿ ಪ್ರಧಾನಿ,   ಇಂದಿರಾ ಗಾಂಧಿಯವರ ಜನ್ಮದಿನ ಹಾಗೂ ಜಿಲ್ಲಾ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ನೇಮಕಗೊಂಡ   ಮಂಜೇಗೌಡ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡರು.  ಈ ಸಂದರ್ಭ ದೇಶಕ್ಕಾಗಿ ಬದುಕು ಸವೆಸಿದ ಮಹಾಚೇತನ ಇಂದಿರಾಗಾಂಧಿಯವರ ಭಾವಚಿತ್ರಕ್ಕೆ  ನಮಿಸಿ, ನೂತನ ಜಿಲ್ಲಾಧ್ಯಕ್ಷರಿಗೆ ಶುಭ ಹಾರೈಸಿದರು. ಕೆಪಿಸಿಸಿ ಅಧ್ಯಕ್ಷ  ಬಿ.ಕೆ. ಹರಿಪ್ರಸಾದ್, ಎಐಸಿಸಿ ಕಾರ್ಯದರ್ಶಿಗಳಾದ ಸಂದೀಪ್, ಸಚಿವ  ರಿಜ್ವಾನ್ ಅರ್ಷದ್, ಶಾಸಕರಾದ ತಮ್ಮಯ್ಯ, ಶ್ರೀನಿವಾಸ್, ಆನಂದ್, ನಯನ ಮೋಟಮ್ಮ, ಗಾಯತ್ರಿ ಶಾಂತೇಗೌಡ, ಆರತಿ ಕೃಷ್ಣ ಸೇರಿದಂತೆ ಅನೇಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು.