ಬೆಂಗಳೂರು :   ಇಂದು ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ʼಶೈಕ್ಷಣಿಕ ಸಾರಥ್ಯʼ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ನೂತನವಾಗಿ ಆಯ್ಕೆಯಾಗಿರುವ ಪ್ರಾಂಶುಪಾಲರಿಗೆ ನೇಮಕಾತಿ ಆದೇಶ ಪ್ರದಾನ ಮಾಡಿದರು.ಸರ್ಕಾರಿ ಕಾಲೇಜುಗಳ ಶೈಕ್ಷಣಿಕ ಗುಣಮಟ್ಟವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಪ್ರಾಂಶುಪಾಲರ ನಾಯಕತ್ವ ನಿರ್ಣಾಯಕವಾಗಿದೆ. ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳ ನಡುವೆ ಸಮನ್ವಯ ಸಾಧಿಸಿ, ಕಲಿಕೆಗೆ ಪೂರಕ ವಾತಾವರಣ ಕಲ್ಪಿಸುವಲ್ಲಿ ಇವರ ಪಾತ್ರ ದೊಡ್ಡದು. ನೂತನವಾಗಿ ಆಯ್ಕೆಯಾದ ಪ್ರಾಂಶುಪಾಲರ ದಕ್ಷ ಕಾರ್ಯವೈಖರಿಯಿಂದ ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಮತ್ತಷ್ಟು ಬಲ ಸಿಗಲಿದೆ ಎಂದರು.ಈ ವೇಳೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಪೌರಾಡಳಿತ ಸಚಿವ ಹೆಚ್‌.ಸಿ. ಬಾಲಕೃಷ್ಣ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.