ರೈತರ ಸಮಸ್ಯೆ ಪರಿಹಾರವಾಗುವವರೆಗೂ ಸಫಾರಿ ಕೇಂದ್ರದ ಎದುರು ಹೋರಾಟ : ಮಹಾದೇವಪ್ಪ
ಸಫಾರಿಗೆ ಆಗಮಿಸುವ ಪ್ರವಾಸಿಗರು ಕೆಲ ದಿನ ಮುಂದೂಡುವಂತೆ ಸಾರ್ವಜನಿಕರಲ್ಲಿ ಮನವಿ

ಗುಂಡ್ಲುಪೇಟೆ : ದಶಕಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ರೈತರಿಗೆ ಸಾಗುವಳಿ ಪತ್ರ ವಿತರಣೆ ಹಾಗೂ ಜಮೀನುಗಳ ದುರಸ್ತಿಗೆ ಅರಣ್ಯ ಇಲಾಖೆ ಎನ್ಒಸಿ ನೀಡುವಂತೆ ಒತ್ತಾಯಿಸಿ ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಲಾಗಿದೆ. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯುವವರೆಗೂ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಚಾಮರಾಜನಗರ ಜಿಲ್ಲಾಧ್ಯಕ್ಷ ಮಹಾದೇವಪ್ಪ ಎಚ್ಚರಿಕೆ ನೀಡಿದರು.ತಾಲೂಕಿನಲ್ಲಿ ರೈತ ಸಂಘದ ವತಿಯಿಂದ ನಡೆಯುತ್ತಿರುವ 87ನೇ ದಿನದ ಅಹೋರಾತ್ರಿ ಧರಣಿ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಸುಮಾರು 60ರಿಂದ 70 ವರ್ಷಗಳಿಂದ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಬದುಕು ಕಟ್ಟಿಕೊಂಡಿರುವ ರೈತರಿಗೆ ಸಾಗುವಳಿ ಪತ್ರ ವಿತರಿಸಲು ಹಾಗೂ ಜಮೀನುಗಳ ದುರಸ್ತಿಗೆ ಅರಣ್ಯ ಇಲಾಖೆ ಎನ್ಒಸಿ ನೀಡಬೇಕೆಂದು ಹಲವು ದಿನಗಳಿಂದ ಒತ್ತಾಯಿಸಲಾಗುತ್ತಿದೆ. ಆದರೆ ಈವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ತಾಲೂಕಿನ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಸರ್ಕಾರದ ಜನಪ್ರತಿನಿಧಿಗಳು ರೈತರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ. ರೈತರ ಬದುಕಿಗೆ ಭದ್ರತೆ ಕಲ್ಪಿಸುವ ಹಕ್ಕುಪತ್ರ ವಿತರಣೆ ಹಾಗೂ ಜಮೀನುಗಳ ದುರಸ್ತಿ ಕಾರ್ಯಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ. ರೈತರ ಸಮಸ್ಯೆಗಳನ್ನು ಕೇವಲ ಚುನಾವಣೆಗೆ ಸೀಮಿತಗೊಳಿಸಿರುವುದು ವಿಷಾದನೀಯ ಎಂದರು.ಈ ಹಿನ್ನೆಲೆಯಲ್ಲಿ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ಮುಂಭಾಗ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ರೈತರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಪರಿಹಾರ ಕಲ್ಪಿಸುವವರೆಗೂ ಹೋರಾಟ ಮುಂದುವರಿಯಲಿದೆ. ರೈತರ ಹೋರಾಟಕ್ಕೆ ಸಾರ್ವಜನಿಕರು ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.ಸಫಾರಿಗೆ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರು ರೈತರ ಹೋರಾಟದ ಉದ್ದೇಶವನ್ನು ಅರ್ಥಮಾಡಿಕೊಂಡು ಕೆಲ ದಿನಗಳ ಕಾಲ ಸಫಾರಿ ಪ್ರವಾಸವನ್ನು ಮುಂದೂಡುವ ಮೂಲಕ ರೈತರ ಸಂಕಷ್ಟಗಳಿಗೆ ಸಹಕಾರ ನೀಡಬೇಕು. ಸಾರ್ವಜನಿಕರಿಗೂ ರೈತ ಸಂಘಟನೆಗೂ ಯಾವುದೇ ತೊಂದರೆಯಾಗದಂತೆ ಹೋರಾಟ ನಡೆಸಲಾಗುವುದು. ರೈತರ ಸಮಸ್ಯೆಗಳಿಗೆ ಅರಣ್ಯ ಇಲಾಖೆ ಸೂಕ್ತ ಪರಿಹಾರ ಕಲ್ಪಿಸುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ತಿಳಿಸಿದರು.ಮುಖ್ಯಮಂತ್ರಿ, ಕೃಷಿ ಸಚಿವರು, ಕಂದಾಯ ಸಚಿವರು ಹಾಗೂ ಅರಣ್ಯ ಸಚಿವರು ಕೂಡಲೇ ಮಧ್ಯಪ್ರವೇಶಿಸಿ ರೈತರಿಗೆ ಸಾಗುವಳಿ ಪತ್ರ ವಿತರಣೆ ಮತ್ತು ಜಮೀನುಗಳ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮಾಧ್ಯಮಗಳ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಸಂಬಂಧಿತ ಸುದ್ದಿಗಳು

ಡಿ.12ರಂದು ಲೋಕ ಅದಾಲತ್ ಕಾರ್ಯಕ್ರಮ
ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮೈಸೂರು ವತಿಯಿಂದ ಡಿ.12ರಂದ…
◷ 19/11/2026
ಭಕ್ತ ಕನಕದಾಸರ ಜಯಂತಿ : ಅಗತ್ಯ ಸಿದ್ದತೆಗೆ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಸೂಚನೆ
ಬಳ್ಳಾರಿ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ, ಜಿಲ್ಲಾ ಕೇಂದ್ರದಲ್ಲಿ ನ. 27 ರಂದು ಸಂತ ಶ್…
◷ 19/11/2026
ಆಶಾ ಕಾರ್ಯಕರ್ತೆಯರ ಸಭೆ ನಡೆಸಿ ಸಮಸ್ಯೆ ಆಲಿಸಿದ ಸಿಎಂ
ಬೆಂಗಳೂರು : ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಶಾ…
◷ 19/11/2026
ಎಂ.ಕೆ ಮಲ್ಲೇಶ್ ಗೆ ಅಭಿನಂದನೆ
ಮೈಸೂರು : ಸರ್ಕಾರದ ಆದೇಶದಂತೆ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಇಲ್ಲಿನ ಸಂಶೋಧನಾಧಿಕಾರಿಯಾಗಿ ಇಂದು ಕಾರ್ಯ ವರದಿ ಮಾಡಿಕೊ…
◷ 19/11/2026
