ಬಂಡೀಪುರದಲ್ಲಿ ತಮಿಳುನಾಡು ಸಚಿವರಿಂದ ವನ್ಯಜೀವಿ ನಿಯಮ ಉಲ್ಲಂಘನೆ ಆರೋಪ ಹಿನ್ನೆಲೆ : ತನಿಖೆಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ

ಬೆಂಗಳೂರು : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಒಳಗೆ ತಮಿಳುನಾಡು ಸಚಿವ ವನ್ನಿ ಅರಸು ಅವರು ಕಾಡಾನೆಯನ್ನು ಬೆನ್ನಟ್ಟಿದ್ದಾರೆ ಎನ್ನಲಾದ ವೈರಲ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ತನಿಖೆಗೆ ಆದೇಶಿಸಿದ್ದಾರೆ.ತಮ್ಮ ಸಾಮಾಜಿಕ ಜಾಲತಾಣ ತಂಡವು ಈ ವಿಡಿಯೋವನ್ನು ಗಮನಕ್ಕೆ ತಂದಿದ್ದು, ಅದರಲ್ಲಿ ವಾಹನದ ನೋಂದಣಿ ಸಂಖ್ಯೆ ಹಾಗೂ ಇತರ ವಿವರಗಳು ಸ್ಪಷ್ಟವಾಗಿ ಕಂಡುಬಂದಿವೆ ಎಂದು ಸಚಿವರು ತಿಳಿಸಿದ್ದಾರೆ. ಘಟನೆಯ ಕುರಿತು ಕೂಲಂಕಷವಾಗಿ ತನಿಖೆ ನಡೆಸುವಂತೆ ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಈ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (PCCF) ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (DGP-IGP) ಪತ್ರ ಬರೆಯುವುದಾಗಿ ಸಚಿವರು ಹೇಳಿದ್ದಾರೆ.ಸಂರಕ್ಷಿತ ಅರಣ್ಯ ಪ್ರದೇಶಗಳ ನಿಯಮಗಳು ಯಾರೇ ಆಗಲಿ, ಎಷ್ಟೇ ಉನ್ನತ ಹುದ್ದೆಯಲ್ಲಿದ್ದರೂ ಎಲ್ಲರಿಗೂ ಸಮಾನವಾಗಿ ಅನ್ವಯಿಸುತ್ತವೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಸಚಿವರು ಕಟ್ಟುನಿಟ್ಟಾಗಿ ಎಚ್ಚರಿಸಿದ್ದಾರೆ.
ಸಂಬಂಧಿತ ಸುದ್ದಿಗಳು

ಡಿ.12ರಂದು ಲೋಕ ಅದಾಲತ್ ಕಾರ್ಯಕ್ರಮ
ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮೈಸೂರು ವತಿಯಿಂದ ಡಿ.12ರಂದ…
◷ 19/11/2026
ಭಕ್ತ ಕನಕದಾಸರ ಜಯಂತಿ : ಅಗತ್ಯ ಸಿದ್ದತೆಗೆ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಸೂಚನೆ
ಬಳ್ಳಾರಿ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ, ಜಿಲ್ಲಾ ಕೇಂದ್ರದಲ್ಲಿ ನ. 27 ರಂದು ಸಂತ ಶ್…
◷ 19/11/2026
ಆಶಾ ಕಾರ್ಯಕರ್ತೆಯರ ಸಭೆ ನಡೆಸಿ ಸಮಸ್ಯೆ ಆಲಿಸಿದ ಸಿಎಂ
ಬೆಂಗಳೂರು : ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಶಾ…
◷ 19/11/2026
ಎಂ.ಕೆ ಮಲ್ಲೇಶ್ ಗೆ ಅಭಿನಂದನೆ
ಮೈಸೂರು : ಸರ್ಕಾರದ ಆದೇಶದಂತೆ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಇಲ್ಲಿನ ಸಂಶೋಧನಾಧಿಕಾರಿಯಾಗಿ ಇಂದು ಕಾರ್ಯ ವರದಿ ಮಾಡಿಕೊ…
◷ 19/11/2026
