ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಡಿ.31ರವರೆಗೆ ಅವಧಿ ವಿಸ್ತರಣೆ

ಮೈಸೂರು : 2026-27ನೇ ಶೈಕ್ಷಣಿಕ ಸಾಲಿನಲ್ಲಿ ಬಿ.ಎಸ್ಸಿ ನರ್ಸಿಂಗ್ (B.Sc Nursing) ಹಾಗೂ ಜಿಎನ್‌ಎಂ (GNM) ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅಲ್ಪಸಂಖ್ಯಾತರ ನಿರ್ದೇಶನಾಲಯ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 31, 2026 ಕೊನೆಯ ದಿನವಾಗಿದೆ.ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು ಹಾಗೂ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಕೋರ್ಸ್ ಪೂರ್ಣಾವಧಿಯ (Regular) ಆಗಿರಬೇಕು ಮತ್ತು ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷ ಮೀರಬಾರದು. ಅನುದಾನದ ಲಭ್ಯತೆಗೆ ಅನುಗುಣವಾಗಿ ಮೆರಿಟ್ ಆಧಾರದ ಮೇಲೆ ಆಯ್ಕೆ ನಡೆಯಲಿದೆ.ಪ್ರೋತ್ಸಾಹಧನ ಪಡೆಯಲು ಪ್ರತಿ ಶೈಕ್ಷಣಿಕ ವರ್ಷ ಹೊಸ (Fresh) ಅರ್ಜಿ ಸಲ್ಲಿಸಬೇಕು ಮತ್ತು ಕೋರ್ಸ್ ಅವಧಿಯಲ್ಲಿ ಒಮ್ಮೆ ಮಾತ್ರ ಈ ಸೌಲಭ್ಯ ಪಡೆಯಲು ಅರ್ಹತೆ ಇರುತ್ತದೆ.ಅರ್ಹ ವಿದ್ಯಾರ್ಥಿಗಳು https://sevasindhu.karnataka.gov.in/Sevasindhu/DepartmentServices ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕದಂದು ಅಲ್ಪಸಂಖ್ಯಾತರ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗೆ https://dom.karnataka.gov.in ವೆಬ್‌ಸೈಟ್, ಹತ್ತಿರದ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳು ಅಥವಾ ಮೈಸೂರಿನ ಬೆಂಗಳೂರು-ಮೈಸೂರು ರಸ್ತೆಯ ದಂಡಿನಮಾರಮ್ಮನ ದೇವಸ್ಥಾನದ ಎದುರಿನ ಮೌಲಾನ ಆಜಾದ್ ಭವನದಲ್ಲಿರುವ (ಶೋಭಾ ಗಾರ್ಡನ್ ಪಕ್ಕ, ಮೈಸೂರು-570007) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು. ದೂ: 0821-2422088ನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಸಂಬಂಧಿತ ಸುದ್ದಿಗಳು

ಡಿ.12ರಂದು ಲೋಕ ಅದಾಲತ್ ಕಾರ್ಯಕ್ರಮ
ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮೈಸೂರು ವತಿಯಿಂದ ಡಿ.12ರಂದ…
◷ 19/11/2026
ಭಕ್ತ ಕನಕದಾಸರ ಜಯಂತಿ : ಅಗತ್ಯ ಸಿದ್ದತೆಗೆ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಸೂಚನೆ
ಬಳ್ಳಾರಿ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ, ಜಿಲ್ಲಾ ಕೇಂದ್ರದಲ್ಲಿ ನ. 27 ರಂದು ಸಂತ ಶ್…
◷ 19/11/2026
ಆಶಾ ಕಾರ್ಯಕರ್ತೆಯರ ಸಭೆ ನಡೆಸಿ ಸಮಸ್ಯೆ ಆಲಿಸಿದ ಸಿಎಂ
ಬೆಂಗಳೂರು : ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಶಾ…
◷ 19/11/2026
ಎಂ.ಕೆ ಮಲ್ಲೇಶ್ ಗೆ ಅಭಿನಂದನೆ
ಮೈಸೂರು : ಸರ್ಕಾರದ ಆದೇಶದಂತೆ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಇಲ್ಲಿನ ಸಂಶೋಧನಾಧಿಕಾರಿಯಾಗಿ ಇಂದು ಕಾರ್ಯ ವರದಿ ಮಾಡಿಕೊ…
◷ 19/11/2026
