ಆಶಾ ಕಾರ್ಯಕರ್ತೆಯರ ಸಭೆ ನಡೆಸಿ ಸಮಸ್ಯೆ ಆಲಿಸಿದ ಸಿಎಂ

ಬೆಂಗಳೂರು : ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಶಾ ಕಾರ್ಯಕರ್ತೆಯರ ಸಭೆ ನಡೆಸಿ, ಅವರ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಆಲಿಸಿದರು.ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಶಾ ಕಾರ್ಯಕರ್ತೆಯರು ಮುಂದಿಟ್ಟಿದ್ದು, ಈ ಕುರಿತು ಸಚಿವ ಸಂಪುಟ, ಸಂಬಂಧಪಟ್ಟ ಸಚಿವರು ಹಾಗೂ ಮುಂಬರಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ವೇಳೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ ಹಾಗೂ ರಾಜ್ಯ ಕಾರ್ಯದರ್ಶಿಯಾದ ಡಿ. ನಾಗಲಕ್ಷ್ಮಿ ಅವರು ಉಪಸ್ಥಿತರಿದ್ದರು.
ಸಂಬಂಧಿತ ಸುದ್ದಿಗಳು

ಡಿ.12ರಂದು ಲೋಕ ಅದಾಲತ್ ಕಾರ್ಯಕ್ರಮ
ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮೈಸೂರು ವತಿಯಿಂದ ಡಿ.12ರಂದ…
◷ 19/11/2026
ಭಕ್ತ ಕನಕದಾಸರ ಜಯಂತಿ : ಅಗತ್ಯ ಸಿದ್ದತೆಗೆ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಸೂಚನೆ
ಬಳ್ಳಾರಿ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ, ಜಿಲ್ಲಾ ಕೇಂದ್ರದಲ್ಲಿ ನ. 27 ರಂದು ಸಂತ ಶ್…
◷ 19/11/2026
ಎಂ.ಕೆ ಮಲ್ಲೇಶ್ ಗೆ ಅಭಿನಂದನೆ
ಮೈಸೂರು : ಸರ್ಕಾರದ ಆದೇಶದಂತೆ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಇಲ್ಲಿನ ಸಂಶೋಧನಾಧಿಕಾರಿಯಾಗಿ ಇಂದು ಕಾರ್ಯ ವರದಿ ಮಾಡಿಕೊ…
◷ 19/11/2026
ನಾಳೆ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ–2026 ಸಮಾರೋಪ ಸಮಾರಂಭ
ಮೈಸೂರು : ಸಾರ್ವಜನಿಕ ಗ್ರಂಥಾಲಯ ಇಲಾಖೆ, ಮೈಸೂರು ನಗರ ಮತ್ತು ಜಿಲ್ಲಾ ಕೇಂದ್ರ ಗ್ರಂಥಾಲಯಗಳು, ಮೈಸೂರು ಗ್ರಂಥಪಾಲಕರು ಹಾಗೂ ಮಾಹಿತಿ …
◷ 19/11/2026
