ಡಿ.12ರಂದು ಲೋಕ ಅದಾಲತ್ ಕಾರ್ಯಕ್ರಮ

ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮೈಸೂರು ವತಿಯಿಂದ ಡಿ.12ರಂದು ಲೋಕ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಿವಿಎಲ್ ನ್ಯಾಯಾಧೀಶರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜನತಾ ನ್ಯಾಯಾಲಯದ ಮೂಲ ಉದ್ದೇಶವೇನೆಂದರೆ ಪಕ್ಷಗಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಯರ್ಥ ಪಡಿಸಿಕೊಳ್ಳಬಹುದು. ಇದರಿಂದ ಪಕ್ಷಗಾರರ ಮಧ್ಯದಲ್ಲಿರುವ ವೈಮನಸ್ಸು ಕಡಿಮೆಯಾಗಿ ಸೌಹಾರ್ದತೆ ಹೆಚ್ಚಾಗುತ್ತದೆ. ನ್ಯಾಯಾಲಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ ನ್ಯಾಯಾಧೀಶರು ಹೆಚ್ಚು ಅವಶ್ಯಕತೆ, ಕಾನೂನಿನ ಸಂಕೀರ್ಣತೆ ಇರುವಂತಹ ಪ್ರಕರಣಗಳಿಗೆ ಹೆಚ್ಚು ಒತ್ತು ಕೊಟ್ಟು ನ್ಯಾಯಾಲಯಗಳಲ್ಲಿ ಚಾಲ್ತಿ ಇರುವಂತಹ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ ಎಂದರು. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ 12.12.2026 ರಂದು ಮೈಸೂರು, ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಲೋಕ್ ಅದಾಲತ್ ಮತ್ತು 21.11.2026 ರಂದು NI Act ಪ್ರಕರಣಗಳ ವಿಶೇಷ ಲೋಕ್ ಅದಾಲತ್ ಹಾಗೂ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50%ರಷ್ಟು ರಿಯಾಯಿತಿ ಕುರಿತು ಮಾಹಿತಿ ನೀಡಿದರು.2026 ರಲ್ಲಿ 03 ರಾಷ್ಟ್ರೀಯ ಲೋಕ್ ಅದಾಲತ್‌ಗಳನ್ನು ಹಮ್ಮಿಕೊಳ್ಳಲಾಗಿದ್ದು, 19.09.2026 ರಂದು ಆಯೋಜಿಸಲಾಗಿದ್ದ ಲೋಕ್ ಅದಾಲತ್ ನಲ್ಲಿ ಮೈಸೂರು ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 1,34,313 ಪ್ರಕರಣಗಳಲ್ಲಿ 6,733 ಪ್ರಕರಣಗಳು ಹಾಗೂ 75,064 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ನ್ಯಾಯಾಲಯದಲ್ಲಿ ಬಾಕಿ ಇದ್ದ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳು ಸೇರಿ ಒಟ್ಟು 81,797ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಹಿರಿಯ ಸಿವಿಎಲ್ ನ್ಯಾಯಾಧೀಶರು ತಿಳಿಸಿದ್ದಾರೆ.
ಸಂಬಂಧಿತ ಸುದ್ದಿಗಳು

ಭಕ್ತ ಕನಕದಾಸರ ಜಯಂತಿ : ಅಗತ್ಯ ಸಿದ್ದತೆಗೆ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಸೂಚನೆ
ಬಳ್ಳಾರಿ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ, ಜಿಲ್ಲಾ ಕೇಂದ್ರದಲ್ಲಿ ನ. 27 ರಂದು ಸಂತ ಶ್…
◷ 19/11/2026
ಆಶಾ ಕಾರ್ಯಕರ್ತೆಯರ ಸಭೆ ನಡೆಸಿ ಸಮಸ್ಯೆ ಆಲಿಸಿದ ಸಿಎಂ
ಬೆಂಗಳೂರು : ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಶಾ…
◷ 19/11/2026
ಎಂ.ಕೆ ಮಲ್ಲೇಶ್ ಗೆ ಅಭಿನಂದನೆ
ಮೈಸೂರು : ಸರ್ಕಾರದ ಆದೇಶದಂತೆ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಇಲ್ಲಿನ ಸಂಶೋಧನಾಧಿಕಾರಿಯಾಗಿ ಇಂದು ಕಾರ್ಯ ವರದಿ ಮಾಡಿಕೊ…
◷ 19/11/2026
ನಾಳೆ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ–2026 ಸಮಾರೋಪ ಸಮಾರಂಭ
ಮೈಸೂರು : ಸಾರ್ವಜನಿಕ ಗ್ರಂಥಾಲಯ ಇಲಾಖೆ, ಮೈಸೂರು ನಗರ ಮತ್ತು ಜಿಲ್ಲಾ ಕೇಂದ್ರ ಗ್ರಂಥಾಲಯಗಳು, ಮೈಸೂರು ಗ್ರಂಥಪಾಲಕರು ಹಾಗೂ ಮಾಹಿತಿ …
◷ 19/11/2026
