ಕಾರ್ಕಳ :   ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆರೆಬೆಟ್ಟು ಮತ್ತು ಶಿವಪುರ ಗ್ರಾಮ ಹಾಗೂ ಬ್ರಹ್ಮಾವರ ತಾಲೂಕಿನ ಕಳ್ತೂರು ಗ್ರಾಮದ ಒಟ್ಟು 390 ಭೂಮಾಲಕರ ಸುಮಾರು 263.49 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕೈಗಾರಿಕಾ ಉದ್ದೇಶದ ಭೂಸ್ವಾಧೀನ ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸಿ, ಸದ್ರಿ ಯೋಜನೆಯ ಪ್ರಸ್ತಾಪವನ್ನು ಕೈಬಿಡುವಂತೆ   ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖಾ ಸಚಿವ  ಎಂ.ಬಿ. ಪಾಟೀಲ್ ಮತ್ತು   ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರನ್ನು ಭೇಟಿ ಮಾಡಿದ ಶಾಸಕ ವಿ.ಸುನಿಲ್‌ ಕುಮಾರ್‌ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿ ಮನವಿ ಪತ್ರ ಸಲ್ಲಿಸಿದರು.