ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ 122 ಫಲಾನುಭವಿಗಳಿಗೆ ಲಾಟರಿ ಮೂಲಕ ನಿವೇಶನಗಳ ಸಂಖ್ಯೆ ಹಂಚಿಕೆ

ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆ (PKGBY) ಅಡಿಯಲ್ಲಿ ನಿರ್ಮಿಸಲಾದ 158 ವಸತಿ ಗೃಹಗಳ ಹಂಚಿಕೆಗಾಗಿ ಇಂದು ಲಾಟರಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಒಟ್ಟು 158 ವಸತಿ ಗೃಹಗಳ ಪೈಕಿ 122 ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಲಾಟರಿ ಮೂಲಕ ಅತ್ಯಂತ ಪಾರದರ್ಶಕವಾಗಿ ಫಲಾನುಭವಿಗಳ ಕೈನಲ್ಲಿಯೇ ಲಾಟರಿ ಎತ್ತುವ ಮೂಲಕ ನಿವೇಶನಗಳ ಸಂಖ್ಯೆಯನ್ನು ಹಂಚಿಕೆ ಮಾಡಲಾಯಿತು.ಮನೆಗಳ ಹಂಚಿಕೆ ಪ್ರಕ್ರಿಯೆಯಲ್ಲಿ ಮಾನವೀಯ ದೃಷ್ಟಿಕೋನಕ್ಕೆ ವಿಶೇಷ ಆದ್ಯತೆ ನೀಡಲಾಗಿದ್ದು, ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಪೌರಕಾರ್ಮಿಕರು ಹಾಗೂ ನಿವೃತ್ತ ಪೌರಕಾರ್ಮಿಕರಿಗೆ ಅನುಕೂಲವಾಗುವಂತೆ ನೆಲಮಹಡಿಯ ಮನೆಗಳ ಹಂಚಿಕೆಯಲ್ಲಿ ಆದ್ಯತೆ ನೀಡಲಾಯಿತು.
ನವೆಂಬರ್ 25ರಂದು ವಸತಿ ಗೃಹಗಳ ಉದ್ಘಾಟನೆ
ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ನಿರ್ಮಿಸಲಾದ ವಸತಿ ಗೃಹಗಳ ಉದ್ಘಾಟನಾ ಸಮಾರಂಭವು 25-11-2026ರಂದು ನಡೆಯಲಿದೆ. ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಂದ ವಸತಿ ಗೃಹಗಳ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಹಸ್ತಾಂತರ ಕಾರ್ಯಕ್ರಮ ನಡೆಯಲಿದ್ದು, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿದೆ. ಇಂದಿನ ಲಾಟರಿ ಕಾರ್ಯಕ್ರಮದಲ್ಲಿ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಸವಿತಾ ಎಂ.ಕೆ., ಹೆಚ್ಚುವರಿ ಆಯುಕ್ತ ವೀಣಾ, ಕಾರ್ಯಪಾಲಕ ಅಭಿಯಂತರ ಮೃತ್ಯುಂಜಯ ಕೆ.ಎಸ್., ಸಹಾಯಕ ಕಾರ್ಯಪಾಲಕ ಅಭಿಯಂತರರು, ಆರೋಗ್ಯ ನಿರೀಕ್ಷಕರು, ವ್ಯವಸ್ಥಾಪಕರು ಹಾಗೂ ಆರೋಗ್ಯ ಮತ್ತು ವಸತಿ ವಿಭಾಗಗಳ ವಿಷಯ ನಿರ್ವಾಹಕರು ಉಪಸ್ಥಿತರಿದ್ದರು. ಪೌರಕಾರ್ಮಿಕರ ಜೀವನಮಟ್ಟ ಸುಧಾರಣೆ, ಸಾಮಾಜಿಕ ಭದ್ರತೆ ಹಾಗೂ ಸ್ವಂತ ಸೂರಿನ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಈ ಯೋಜನೆಯು ಮಹತ್ವದ ಹೆಜ್ಜೆಯಾಗಿದೆ.
ಸಂಬಂಧಿತ ಸುದ್ದಿಗಳು

ಸ್ಟಿಂಗ್ ಆಪರೇಷನ್ ಪ್ರಕರಣ : ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ ಸೇರಿದಂತೆ…
◷ 20/11/2026
ಸಾಧಕಿಯರ ಬದುಕು ಇಂದಿನ ಯುವಜನತೆಗೆ ದಾರಿದೀಪ : ಟಿ.ಎಸ್ ಶ್ರೀವತ್ಸ ಅಭಿಮತ
ಮೈಸೂರು : ಮಹನೀಯರ ಜಯಂತಿ ಮತ್ತು ಸ್ಮರಣಾರ್ಥ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲ ಉದ್ದೇಶ ಅವರ ಆದರ್ಶ, ತ್ಯಾಗ ಮತ್ತು ನಡೆದು ಬಂದ ಹಾದ…
◷ 20/11/2026
ಡ್ರೈನೇಜ್ ಗುಂಡಿ ಮುಚ್ಚದ ಕಾರಣ ಹಳ್ಳಕ್ಕೆ ಬಿದ್ದ ಸ್ಕೂಟರ್, ಪತಿ ಸಾವು - ಪತ್ನಿ ಗಂಭೀರ; ಶವವಿಟ್ಟು ಪ್ರತಿಭಟನೆ
ವಡ್ಡರಕೊಪ್ಪಲು ಶಿವರಾಮು ಕೆ ಆರ್ ನಗರ : ಚಂದಗಾಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿರನಹಳ್ಳಿ ಗ್ರಾಮ ವ್ಯಾಪ್ತಿಯ ರಸ್ತೆ ಪಕ್ಕದಲ್ಲಿ ತೆ…
◷ 20/11/2026
ನ.25ರಂದು ಬೆಂಗಳೂರು ನಗರಕ್ಕೆ ಕಾವೇರಿ ನೀರು ಸ್ಥಗಿತ
ಬೆಂಗಳೂರು : ನವೆಂಬರ್ 25 ರಂದು ಬೆಂಗಳೂರು ನಗರಕ್ಕೆ ಕಾವೇರಿ ನೀರು ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.ನೀರು ಸ…
◷ 20/11/2026
