ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್‌ ಆಪರೇಷನ್‌  ಪ್ರಕರಣಕ್ಕೆ ಸಂಬಂಧಿಸಿದಂತೆ  ಕೃಪಾ ಆಳ್ವಾ ಸೇರಿದಂತೆ 6 ಮಂದಿಯ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಲಾಗಿದ್ದು, ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾಗೆ  ಇದೀಗ  ಬಂಧನದ ಭೀತಿ ಎದುರಾಗಿದೆ. ಸ್ಟಿಂಗ್ ಪ್ರಕರಣದಲ್ಲಿ 6 ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿ ಆದೇಶಿಸಿದೆ. ಕೃಪಾ ಆಳ್ವಾ, ಜೆಡಿಎಸ್ ಸೋಷಿಯಲ್ ಮೀಡಿಯಾ ಕಾರ್ಯಕರ್ತರರಾದ ಪ್ರಜ್ವಲ್ ಪ್ರಸಾದ್, ಚಂದನ್ ಹೆಚ್‌.ಎಸ್, ಕೆ.ವಿ ಪ್ರಶಾಂತ್ ಕುಮಾರ್, ವಿನೋದ್ ಕುಮಾರ್ ಸೇರಿ 6 ಮಂದಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.