ಚಿತ್ರದುರ್ಗ :  ಮುಂಬರುವ ಉಪ ಚುನಾವಣೆಯ ಸಿದ್ಧತೆ ಮತ್ತು ಪಕ್ಷದ ಬಲವರ್ಧನೆಯ ಹಿನ್ನೆಲೆಯಲ್ಲಿ ಇಂದು ಹಿರಿಯೂರಿನಲ್ಲಿ ಭಾರತೀಯ ಜನತಾ ಪಕ್ಷದ ಪ್ರಮುಖ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳೊಂದಿಗೆ ಮಹತ್ವದ ಸಂಘಟನಾ ಸಭೆಯನ್ನು ನಡೆಸಲಾಯಿತು ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.ಪಕ್ಷದ ತತ್ವ-ಸಿದ್ಧಾಂತಗಳನ್ನು ಜನಸಾಮಾನ್ಯರಿಗೆ ತಲುಪಿಸುವುದು, ಬೂತ್ ಮಟ್ಟದಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವುದು ಮತ್ತು ಚುನಾವಣಾ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು. ಕಾರ್ಯಕರ್ತರ ಉತ್ಸಾಹ ಮತ್ತು ಬದ್ಧತೆ ನಮ್ಮ ಪಕ್ಷದ ನಿಜವಾದ ಶಕ್ತಿಯಾಗಿದೆ ಎಂದು ಇದೇ ವೇಳೆ ಹೇಳಿದರು.ಈ ಸಂದರ್ಭದಲ್ಲಿ   ಸಿ ಟಿ ರವಿ, ಪ್ರೀತಮಗೌಡ,   ಧೀರಜ್ ಮುನಿರಾಜು,   ಮೇಘರಾಜ್ ಮತ್ತು ಪಕ್ಷದ ಸ್ಥಳೀಯ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.