ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆ ನನಗೆ ಸೂಕ್ತವಲ್ಲ : ಶಾಸಕ ತನ್ವೀರ್ ಸೇಠ್

ಮೈಸೂರು : ನನಗೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆ ಸೂಕ್ತವಲ್ಲ. ಅದು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವ ಹುದ್ದೆಯಲ್ಲ. ಈ ಹುದ್ದೆಯಿಂದ ನನಗೆ ತೃಪ್ತಿಯಿಲ್ಲ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ಶಾಸಕ ತನ್ವೀರ್ ಸೇಠ್ ಅವರನ್ನು ನೇಮಕ ಮಾಡಲಾಗಿದೆ ಎಂಬ ಮಾಹಿತಿ ಹೊರಬಿದ್ದ ಬೆನ್ನಲ್ಲೇ ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೇಮಕಾತಿ ಕುರಿತು ಪ್ರತಿಕ್ರಿಯಿಸಿರುವ ಅವರು, ಮುಖ್ಯಮಂತ್ರಿ ಅವರಿಗೆ ರಾಜಕೀಯವಾಗಿ ಶಕ್ತಿ ತುಂಬುವ ಕೆಲಸವನ್ನು ಹಿಂದಿನಿಂದಲೂ ಮಾಡಿಕೊಂಡು ಬಂದಿದ್ದೇವೆ. ನನ್ನ ಹಿರಿತನಕ್ಕೆ ತಕ್ಕ ಸ್ಥಾನವನ್ನು ಕಲ್ಪಿಸುತ್ತಾರೆ ಎಂಬ ವಿಶ್ವಾಸವಿತ್ತು. ಆದರೆ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ ಎಂಬ ಮಾಹಿತಿ ಬಂದಿದೆ. ಈ ಹುದ್ದೆ ನನಗೆ ಸೂಕ್ತವಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಈ ಹಿಂದೆ ಕೂಡ ಈ ಹುದ್ದೆ ಬೇಡ ಎಂದು ತಿಳಿಸಿದ್ದೆ. ಆದರೆ ಈವರೆಗೆ ಮುಖ್ಯಮಂತ್ರಿ ಕಚೇರಿಯಿಂದ ಯಾವುದೇ ಕರೆ ಬಂದಿಲ್ಲ. ಹೀಗಾಗಿ ಸಿಎಂ ಏನು ಹೇಳುತ್ತಾರೆ ಎಂಬುದನ್ನು ನೋಡಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಸಂಬಂಧಿತ ಸುದ್ದಿಗಳು

ತುಳಸಿ ಗಿಡವು ಪವಿತ್ರತೆಯ ಸಂಕೇತ : ಸುರೇಶ್. ಎನ್ .ಋಗ್ವೇದಿ
ಚಾಮರಾಜನಗರ : ತುಳಸಿ ಗಿಡವು ಪವಿತ್ರತೆಯ ಸಂಕೇತ. ಭಾರತೀಯ ಸನಾತನ ಧರ್ಮದಲ್ಲಿ ತುಳಸಿ ಗಿಡಕ್ಕೆ ಅಪಾರ ಗೌರವ, ಭಕ್ತಿ, ನಂಬಿಕೆ ಮತ್ತು ಮ…
◷ 22/11/2026
ಆರೋಗ್ಯ ಮಾಹಿತಿ ತಲುಪಿಸುವಲ್ಲಿ ಬಹುಭಾಷಾ ಎಐ (AI) ಮಹತ್ವದ ಪಾತ್ರ : ಭಾಷಿಣಿ ಸಿಇಒ ಅಮಿತಾಬ್ ನಾಗ್
ನವದೆಹಲಿ : ವೈದ್ಯರು ಮತ್ತು ರೋಗಿಗಳ ನಡುವಿನ ಸಂವಹನವನ್ನು ಸುಧಾರಿಸುವ ಮೂಲಕ, ವೈದ್ಯಕೀಯ ದಾಖಲೆಗಳನ್ನು ಸರಳಗೊಳಿಸುವ ಮೂಲಕ ಹಾಗೂ ಆರೋ…
◷ 22/11/2026
ದ್ವಿಪಕ್ಷೀಯ ಸಂಬಂಧ ಸುಧಾರಣೆಯ ಗುರಿ: ನೇಪಾಳ ಪ್ರಧಾನಿ ಬಾಲೇಂದ್ರ ಶಾ ಅವರ ಮೊದಲ ಅಧಿಕೃತ ಭಾರತ ಭೇಟಿ
ನವದೆಹಲಿ : ಮಾರ್ಚ್ನಲ್ಲಿ ಅಧಿಕಾರ ವಹಿಸಿಕೊಂಡ ನಂತರ ನೇಪಾಳ ಪ್ರಧಾನಿ ಬಾಲೇಂದ್ರ ಶಾ ಅವರು ತಮ್ಮ ಮೊದಲ ಅಧಿಕೃತ ದ್ವಿಪಕ್ಷೀಯ ಭೇಟಿಗಾ…
◷ 22/11/2026
ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ₹22,400 ಕೋಟಿ ನೆರವು ನೀಡುವಂತೆ ಮನವಿ : ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
ಬೆಂಗಳೂರು : ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಧಾವಿಸುವುದು ನಮ್ಮ ಮೊದಲ ಆದ್ಯತೆಯಾಗಿದ್ದು ರಾಜ್ಯದ ರೈತರ ಹಿತದೃಷ್ಟಿಯ…
◷ 22/11/2026
