ಮಂಡ್ಯ :  ಮಳೆ  ಕಾವೇರಿ ಜಲಾನಯನ ಪ್ರದೇಶದಲ್ಲಿ ಸಂಪೂರ್ಣ ಕೈಕೊಟ್ಟಿರುವ ಹಿನ್ನೆಲೆಯಲ್ಲಿ  ಕೆಆರ್‌ಎಸ್ ಜಲಾಶಯದ  ಒಡಲು ದಿನೇ ದಿನೇ ಬರಿದಾಗುತ್ತಿದ್ದು, ನೀರಿನ ಮಟ್ಟ 96 ಅಡಿಗೆ ಕುಸಿದಿದೆ.ಮಂಡ್ಯ   ಜಿಲ್ಲೆಯ ಶ್ರೀರಂಗಪಟ್ಟಣ ( ತಾಲೂಕಿನಲ್ಲಿರುವ ಕೆಆರ್‌ಎಸ್‌ನಲ್ಲಿ ದಿನೇ ದಿನೇ ನೀರಿನ ಮಟ್ಟ ಕಡಿಮೆಯಾಗುತ್ತಿದೆ. ಒಳಹರಿವು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿರುವುದು ರೈತರು ಹಾಗೂ ಕಾವೇರಿ ನೀರನ್ನೇ ನಂಬಿರುವ ಜನರಲ್ಲಿ ತೀವ್ರ ಆತಂಕ ಮೂಡಿಸಿದೆ.ಒಟ್ಟು 49.452 ಟಿಎಂಸಿ ಗರಿಷ್ಠ ಸಾಮರ್ಥ್ಯ ಹೊಂದಿರುವ ಕೆಆರ್‌ಎಸ್ ಜಲಾಶಯದಲ್ಲಿ ಪ್ರಸ್ತುತ ಕೇವಲ 20.434 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ. ಇದರಲ್ಲಿ 7 ಟಿಎಂಸಿ ನೀರು ಡೆಡ್ ಸ್ಟೋರೇಜ್ (ಬಳಸಲಾಗದ ನೀರು) ಆಗಿ ಉಳಿಯಲಿದ್ದು, ಬಳಕೆಗೆ ಕೇವಲ 13 ಟಿಎಂಸಿ ನೀರು ಮಾತ್ರ ಸಿಗಲಿದೆ.