ನವೆಂಬರ್ 26 ರಂದು ಮೈಸೂರಿನಲ್ಲಿ ರಾಜ್ಯ ಮಟ್ಟದ ಸಂವಿಧಾನ ದಿನಾಚರಣೆ : ಜಿ. ಲಕ್ಷ್ಮಿಕಾಂತ್ ರೆಡ್ಡಿ

ಮೈಸೂರು : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿನ ರಾಜ್ಯ ಮಟ್ಟದ ಸಂವಿಧಾನ ದಿನಾಚರಣೆಯನ್ನು ನ. 26 ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಗಳಾದ ಜಿ. ಲಕ್ಷ್ಮಿಕಾಂತ್ ರೆಡ್ಡಿ ಅವರು ತಿಳಿಸಿದರು.ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆ ಸಂಬಂಧ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಎಲ್ಲಾ ಸಮಿತಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಶಿಷ್ಟಾಚಾರದಂತೆ ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಿದರು.ನ. 26 ರಂದು ಮೈಸೂರಿನ ಗನ್ ಹೌಸ್ ವೃತ್ತದಿಂದ ಮಹಾರಾಜ ಕಾಲೇಜು ಮೈದಾನದವರೆಗೆ ರಥದ ಮೇಲೆ ಸಂವಿಧಾನ ಗ್ರಂಥವನ್ನು ಇರಿಸಿ ಭವ್ಯ ಮೆರವಣಿಗೆ ನಡೆಸಲಾಗುವುದು. ಈ ಮೆರವಣಿಗೆಯಲ್ಲಿ ಕಲಾ ತಂಡಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ಸಾರುವ ಡಿಜಿಟಲ್ ಕಂಟೆಂಟ್ ವ್ಯಾನ್‌ಗಳು ಸಾಗಲಿವೆ ಎಂದು ಹೇಳಿದರು.ನಗರದ ಟೌನ್ ಹಾಲ್ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸಬೇಕು. ಮಾಲಾರ್ಪಣೆ ಮಾಡಲು ಅಂಬೇಡ್ಕರ್, ಗಾಂಧಿ ಹಾಗೂ ಬಸವೇಶ್ವರ ಪ್ರತಿಮೆಗಳನ್ನು ಸ್ವಚ್ಛಗೊಳಿಸಿ ವ್ಯವಸ್ಥಿತವಾಗಿ ತಯಾರಿ ಮಾಡಿಕೊಳ್ಳಬೇಕು. ಸ್ವಚ್ಛತೆ ಮತ್ತು ವೇದಿಕೆ ನಿರ್ಮಾಣದ ವಿಚಾರದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಲು ನಿರ್ದೇಶನ ನೀಡಿದರು.ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮುಖ್ಯ ವೇದಿಕೆ ಕಾರ್ಯಕ್ರಮ ಜರುಗಲಿದೆ. ಸಂವಿಧಾನ ದಿನಾಚರಣೆಯ ಪೂರ್ವಭಾವಿಯಾಗಿ ನವೆಂಬರ್ 25 ರಂದು ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿ ರಾಜ್ಯ ಮಟ್ಟದ ಯುವ ಸಂಸತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಯುವ ಸಂಸತ್ ಆಯೋಜನಾ ಸಮಿತಿ ಸುರಕ್ಷಿತ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.ಆಹ್ವಾನ ಪತ್ರಿಕೆ ಮತ್ತು ಪ್ರಚಾರ ಸಮಿತಿಯು ಶಿಷ್ಟಾಚಾರದಂತೆ ಗಣ್ಯರ ಪಟ್ಟಿ ಸಿದ್ಧಪಡಿಸಿ ಸಮಾಜ ಕಲ್ಯಾಣ ಸಚಿವರು, ಸರ್ಕಾರದ ಕಾರ್ಯದರ್ಶಿಗಳು ಹಾಗೂ ಆಯುಕ್ತರ ಅನುಮೋದನೆಯೊಂದಿಗೆ ಆಹ್ವಾನ ಪತ್ರಿಕೆ ಮುದ್ರಿಸಿ ವಿತರಿಸಬೇಕು ಎಂದು ತಿಳಿಸಿದರು. ವೇದಿಕೆ ಮತ್ತು ಮೆರವಣಿಗೆ ಸಮಿತಿ ಮಹಾರಾಜ ಕಾಲೇಜು ಮೈದಾನದಲ್ಲಿ ಶಿಷ್ಟಾಚಾರದಂತೆ ವೇದಿಕೆ ನಿರ್ಮಾಣ ಉದ್ಘಾಟನಾ ವ್ಯವಸ್ಥೆ ಹಾಗೂ ಗನ್ ಹೌಸ್ ವೃತ್ತದಿಂದ ಸಂವಿಧಾನ ಗ್ರಂಥದ ಮೆರವಣಿಗೆಗೆ ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.ಸಾಂಸ್ಕೃತಿಕ ಮತ್ತು ಡಿಜಿಟಲ್ ಕಂಟೆಂಟ್ ಸಮಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಕಲಾ ತಂಡಗಳನ್ನು ನಿಯೋಜಿಸುವುದು ಹಾಗೂ ಮೆರವಣಿಗೆಯಲ್ಲಿ ಸಂವಿಧಾನದ ಆಶಯಗಳನ್ನು ಬಿಂಬಿಸುವ ವಿಡಿಯೋ ಪ್ರದರ್ಶನಕ್ಕಾಗಿ ಡಿಜಿಟಲ್ ವ್ಯಾನ್‌ಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು. ಸಾರಿಗೆ ಮತ್ತು ಆಹಾರ ಸಮಿತಿ ವಿವಿಧ ಜಿಲ್ಲೆಗಳಿಂದ ಆಗಮಿಸುವ ಸಾರ್ವಜನಿಕರಿಗೆ ಸುರಕ್ಷಿತ ಸಾರಿಗೆ ವ್ಯವಸ್ಥೆ ಕಲ್ಪಿಸುವುದು. ಕಾರ್ಯಕ್ರಮಕ್ಕೆ ಬರುವ ಗಣ್ಯರು, ವಿದ್ಯಾರ್ಥಿಗಳು, ಕಲಾವಿದರು, ಸ್ವಯಂಸೇವಕರು ಹಾಗೂ ಸಾರ್ವಜನಿಕರಿಗೆ ಶುಚಿ-ರುಚಿಯಾದ ಪ್ರತ್ಯೇಕ ಆಹಾರ ಮತ್ತು ಮಜ್ಜಿಗೆ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದರು.ಕಾರ್ಯಕ್ರಮದ ಸ್ಥಳ ಮತ್ತು ಮೆರವಣಿಗೆಯ ಮಾರ್ಗದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್, ಸಂಚಾರ ನಿಯಂತ್ರಣ, ಅಗ್ನಿಶಾಮಕ ದಳ ಹಾಗೂ ಆಂಬುಲೆನ್ಸ್ ಸೇರಿದಂತೆ ತುರ್ತು ಸೇವೆಗಳನ್ನು ಭದ್ರತಾ ಸಮಿತಿ ಸನ್ನದ್ಧವಾಗಿರಿಸುವುದಾಗಿ ತಿಳಿಸಿದರು.ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಪದಾಧಿಕಾರಿಗಳನ್ನು ಆಹ್ವಾನಿಸಿ ಪುತ್ಥಳಿಗೆ ಮಾಲಾರ್ಪಣೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಮನ್ವಯ ಸಾಧಿಸುವುದು. ಅಗತ್ಯ ಸಂಖ್ಯೆಯ ಊಟದ ಕೌಂಟರ್ ಗಳನ್ನು ತೆರೆಯಬೇಕು. ನೂಕು ನುಗ್ಗಲು ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಪೊಲೀಸ್ ಆಯುಕ್ತ ವಿಷ್ಣುವರ್ಧನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎಸ್.ಯುಕೇಶ್ ಕುಮಾರ್, ಮಹಾನಗರ ಪಾಲಿಕೆಯ ಆಯುಕ್ತರಾದ ಎಂ.ಕೆ ಸವಿತಾ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಹೆಚ್.ಎಸ್ ಬಿಂದ್ಯಾ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು
ಸಂಬಂಧಿತ ಸುದ್ದಿಗಳು

ಪರಿಶಿಷ್ಟ ಪಂಗಡದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಿಶೇಷ ಆ್ಯಪ್ ಅಭಿವೃದ್ಧಿ : ರಘುಮೂರ್ತಿ
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಸಚಿವರ ಸಭೆ
◷ 24/11/2026
ಪಶುಸಂಗೋಪನಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ : ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
ತುಮಕೂರು : ಪಶುಸಂಗೋಪನಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪಶುಸಂಪತ್ತಿನ ಸಂರಕ್ಷಣೆ ಹಾಗೂ ರೈತರಿಗ…
◷ 24/11/2026
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸೈಬರ್ ಕಮಾಂಡ್ ಸೆಂಟರ್ ಪೊಲೀಸ್ ರಿಂದ ನೋಟಿಸ್
ಬೆಂಗಳೂರು : ರಾಜ್ಯ ರಾಜಕಾರಣ ಹಾಗೂ ಆಡಳಿತ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಹಾಸನ ಜಿಲ್ಲಾಧಿಕಾರಿ ಕಚೇರಿಯ ‘ಲಂಚದ ವಾಟ್ಸ್ಆ್ಯಪ…
◷ 24/11/2026
ಡಿ.ಕೆ ಶಿವಕುಮಾರ ಅವರನ್ನು ವೈಯುಕ್ತಿಕ ಟೀಕೆ ಮಾಡ್ಕೊಂಡು ಕಾಲ ಕಳೆಯುತ್ತಿದ್ದಾರೆ : ಸಚಿವ ನರೇಂದ್ರ ಸ್ವಾಮಿ ವಾಗ್ದಾಳಿ
ಮೈಸೂರು: ರೇವಣ್ಣ ಹಲವು ಸಲ ಕನಸು ಕಾಣ್ತಾರೆ,ಅವ್ರು ಕನಸು ಕಾಣೋದು ಬಿಡಲಿ ಎಂದು ಸಚಿವ ನರೇಂದ್ರ ಸ್ವಾಮಿ ಹೇಳಿದರು. ಮೈಸೂರಿನಲ್ಲಿ ಮಾಧ…
◷ 24/11/2026
