ಟೊಯೋಟಾ ಮೋಟಾರ್ ಕಾರ್ಪೊರೇಷನ್ನ ಅಧ್ಯಕ್ಷ.ಸಿಇಒ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ಚರ್ಚೆ

ಟೋಕಿಯೋ : ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಸಚಿವ ಎಂ. ಬಿ. ಪಾಟೀಲ್ ಅವರೊಂದಿಗೆ ಜಪಾನ್ನ ಮೊಟೊಮಾಚಿ ಘಟಕದಲ್ಲಿ ಟೊಯೋಟಾ ಮೋಟಾರ್ ಕಾರ್ಪೊರೇಷನ್ನ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಮಸಕಾಜು ಯೋಶಿಮುರಾ ಹಾಗೂ ಹಿರಿಯ ನಾಯಕತ್ವದೊಂದಿಗೆ ಮಹತ್ವದ ಚರ್ಚೆ ನಡೆಸಿದರು.ಟೊಯೋಟಾ ಸಂಸ್ಥೆಯು ತನ್ನ ವಾಹನ ಉತ್ಪಾದನಾ ಸಾಮರ್ಥ್ಯವನ್ನು ಹತ್ತು ಲಕ್ಷಕ್ಕೆ (ಒಂದು ಮಿಲಿಯನ್) ಹೆಚ್ಚಿಸಲು ಯೋಜಿಸಿರುವ ಹಿನ್ನೆಲೆಯಲ್ಲಿ, ಕಂಪನಿಯ ವಿಸ್ತರಣಾ ಯೋಜನೆಗಳಿಗೆ ಕರ್ನಾಟಕ ಸರ್ಕಾರದ ಸಂಪೂರ್ಣ ಬೆಂಬಲವಿರಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಅಲ್ಲದೆ, ಕರ್ನಾಟಕದಲ್ಲಿ ಟೊಯೋಟಾದ ಕೈಗೆಟುಕುವ ದರದ ಹೈಬ್ರಿಡ್ ಎಲೆಕ್ಟ್ರಿಕ್ ಟ್ಯಾಕ್ಸಿ ಮಾದರಿಯನ್ನು ಪರಿಚಯಿಸುವಂತೆ ಉತ್ತೇಜಿಸಿದ ಅವರು, ಫ್ಲೆಕ್ಸ್-ಫ್ಯೂಯಲ್ ವಾಹನಗಳ ಕ್ಷೇತ್ರದಲ್ಲಿನ ಅವಕಾಶಗಳ ಕುರಿತೂ ಚರ್ಚಿಸಿದರು.ನಿಯೋಗವು ಮೊಟೊಮಾಚಿ ಉತ್ಪಾದನಾ ಘಟಕ ಮತ್ತು ಟೊಯೋಟಾ ಕೈಕನ್ ಮ್ಯೂಸಿಯಂಗೆ ಭೇಟಿ ನೀಡಿ ಸುಧಾರಿತ ಉತ್ಪಾದನಾ ಪ್ರಕ್ರಿಯೆ, ತಾಂತ್ರಿಕ ನಾವೀನ್ಯತೆ ಹಾಗೂ ಫ್ಯೂಚರ್ ಮೊಬಿಲಿಟಿ ಕುರಿತು ಮಾಹಿತಿ ಪಡೆಯಿತು. ಇದೇ ವೇಳೆ, ಟೊಯೋಟಾದ ಗ್ಲೋಬಲ್ ಸ್ಕಿಲ್-ಅಪ್ ಕಾರ್ಯಕ್ರಮದಡಿ ಜಪಾನ್ನಲ್ಲಿ ವಿಶೇಷ ತರಬೇತಿ ಪಡೆಯುತ್ತಿರುವ ಕರ್ನಾಟಕದ 20ಕ್ಕೂ ಹೆಚ್ಚು ಐಟಿಐ ಪದವೀಧರರೊಂದಿಗೆ ಮುಖ್ಯಮಂತ್ರಿಗಳು ಸಂವಾದ ನಡೆಸಿದರು.ಮುಂಬರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ (Global Investors Meet) ಟೊಯೋಟಾ ಲೀಡರ್ ಶಿಪ್ ಅನ್ನು ಆಹ್ವಾನಿಸಿದ ಮುಖ್ಯಮಂತ್ರಿಗಳು, ರಾಜ್ಯದ ಉತ್ಪಾದನಾ ವಲಯವನ್ನು ಬಲಪಡಿಸಲು, ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸಲು ಮತ್ತು ಕೌಶಲ್ಯಯುತ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕರ್ನಾಟಕ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಸಂಬಂಧಿತ ಸುದ್ದಿಗಳು

ಕನ್ನಡ ಸಾಹಿತ್ಯ ಪರಿಷತ್ತು ಇಡೀ ಜಗತ್ತೇ ವಿಸ್ಮಯದಿಂದ ನೋಡುವ ಏಕೈಕ ಸಂಸ್ಥೆ : ಡಾ.ವೈ.ಡಿ.ರಾಜಣ್ಣ
ವಿನಯ್ ದೊಡ್ಡಕೊಪ್ಪಲುಕೆ.ಆರ್.ನಗರ : ಕನ್ನಡ ಸಾಹಿತ್ಯ ಪರಿಷತ್ತು ಇಡೀ ಜಗತ್ತೇ ವಿಸ್ಮಯದಿಂದ ನೋಡುವ ಏಕೈಕ ಸಂಸ್ಥೆ ಎಂದು ಜಿಲ್ಲಾ ಕನ್ನ…
◷ 24/11/2026
ಸರ್ಕಾರಿ ಪಿಯು ಕಾಲೇಜುಗಳಲ್ಲಿ ಶೇ.100 ರಷ್ಟು ಫಲಿತಾಂಶ ಸಾಧಿಸಲು ವಿಶೇಷ ಕಾಳಜಿ ವಹಿಸಿ: ಭುವನೇಶ ಪಾಟೀಲ್
ಧಾರವಾಡ : ವಿದ್ಯಾರ್ಥಿಗಳಿಗೆ ಕೇವಲ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಶಿಕ್ಷಣ ನೀಡುವುದಷ್ಟೇ ಶಿಕ್ಷಣ ಇಲಾಖೆಯ ಉದ್ದೇಶವಾಗಬಾರದು. ಅವರು…
◷ 24/11/2026
ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅನುದಾನ ಸದ್ಬಳಕೆಗೆ ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ: ನಿರ್ಲಕ್ಷ್ಯ ವಹಿಸಿದರೆ ಶಿಸ್ತು ಕ್ರಮದ ಎಚ್ಚರಿಕೆ
ಬಳ್ಳಾರಿ: ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಡಿಯಲ್ಲಿ ಬಿಡುಗಡೆಯಾಗಿರುವ ಅನುದಾನವನ್ನು ನಿಗದಿತ ಕಾಲಮಿತಿಯೊಳಗೆ …
◷ 24/11/2026
ಬಳ್ಳಾರಿ ಕನಕದುರ್ಗಮ್ಮ ದೇವಸ್ಥಾನದ ಹುಂಡಿಯಲ್ಲಿ 1.17 ಕೋಟಿ ಕಾಣಿಕೆ ಸಂಗ್ರಹ
ಬಳ್ಳಾರಿ : ನಗರದ ಕನಕದುರ್ಗಮ್ಮ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯವು ಸೋಮವಾರ ಅತ್ಯಂತ ಪಾರದರ್ಶಕವಾಗಿ ನಡೆದಿದ್ದು, ಒಟ್ಟು 1,17,87,9…
◷ 24/11/2026
