'ಪಕ್ಷ ಸೇರ್ಪಡೆ'ಕಾರ್ಯಕ್ರಮ

ಬೆಂಗಳೂರು : ಇಂದು ಬೆಂಗಳೂರಿನ ಭಾರತ ಜೋಡೋ ಭವನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವತಿಯಿಂದ ಆಯೋಜಿಸಲಾಗಿದ್ದ 'ಪಕ್ಷ ಸೇರ್ಪಡೆ'ಕಾರ್ಯಕ್ರಮದಲ್ಲಿ ಹಲವರು ಕಾಂಗ್ರೆಸ್ ಸೇರ್ಪಡೆಗೊಂಡರು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಸಂಸದ ಡಿ.ಕೆ.ಸುರೇಶ್ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದಲ್ಲಿ ಇತರೆ ಪಕ್ಷಗಳ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಬಿ.ಕೆ.ಹರಿಪ್ರಸಾದ್ ಅವರು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಹಾಗೂ ಜನಪರ ಆಡಳಿತವನ್ನು ಮೆಚ್ಚಿ ಹಲವಾರು ಮುಖಂಡರು ಮತ್ತು ಕಾರ್ಯಕರ್ತರು ಇಂದು ಪಕ್ಷದ ಕೈ ಹಿಡಿದಿದ್ದು, ಸಂಘಟನೆ ಮತ್ತು ಜನಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಅವರಿಗೆ ಡಿ.ಕೆ.ಸುರೇಶ್ ಶುಭ ಹಾರೈಸಿದರು.ಈ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್, ಹಿರಿಯ ನಾಯಕ ಹನುಮಂತರಾಯಪ್ಪ, ಕುಸುಮ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಸಂಬಂಧಿತ ಸುದ್ದಿಗಳು

ಪರಿಶಿಷ್ಟ ಪಂಗಡದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಿಶೇಷ ಆ್ಯಪ್ ಅಭಿವೃದ್ಧಿ : ರಘುಮೂರ್ತಿ
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಸಚಿವರ ಸಭೆ
◷ 24/11/2026
ಪಶುಸಂಗೋಪನಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ : ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
ತುಮಕೂರು : ಪಶುಸಂಗೋಪನಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪಶುಸಂಪತ್ತಿನ ಸಂರಕ್ಷಣೆ ಹಾಗೂ ರೈತರಿಗ…
◷ 24/11/2026
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸೈಬರ್ ಕಮಾಂಡ್ ಸೆಂಟರ್ ಪೊಲೀಸ್ ರಿಂದ ನೋಟಿಸ್
ಬೆಂಗಳೂರು : ರಾಜ್ಯ ರಾಜಕಾರಣ ಹಾಗೂ ಆಡಳಿತ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಹಾಸನ ಜಿಲ್ಲಾಧಿಕಾರಿ ಕಚೇರಿಯ ‘ಲಂಚದ ವಾಟ್ಸ್ಆ್ಯಪ…
◷ 24/11/2026
ಡಿ.ಕೆ ಶಿವಕುಮಾರ ಅವರನ್ನು ವೈಯುಕ್ತಿಕ ಟೀಕೆ ಮಾಡ್ಕೊಂಡು ಕಾಲ ಕಳೆಯುತ್ತಿದ್ದಾರೆ : ಸಚಿವ ನರೇಂದ್ರ ಸ್ವಾಮಿ ವಾಗ್ದಾಳಿ
ಮೈಸೂರು: ರೇವಣ್ಣ ಹಲವು ಸಲ ಕನಸು ಕಾಣ್ತಾರೆ,ಅವ್ರು ಕನಸು ಕಾಣೋದು ಬಿಡಲಿ ಎಂದು ಸಚಿವ ನರೇಂದ್ರ ಸ್ವಾಮಿ ಹೇಳಿದರು. ಮೈಸೂರಿನಲ್ಲಿ ಮಾಧ…
◷ 24/11/2026
