ಸರಗೂರು ತಾಲೂಕಿನ ಬಸಾಪುರದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ

ಸರಗೂರು : ತಾಲೂಕಿನ ಬಸಾಪುರ (ಕಿತ್ತೂರು) ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಮತ್ತು ಉದ್ಘಾಟನಾ ಮಹೋತ್ಸವವನ್ನು ರಾಜ್ಯ ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ನೆರವೇರಿಸಿದರು.ಉದ್ಘಾಟನಾ ಮಹೋತ್ಸವದಲ್ಲಿ ಶ್ರೀ ವಾಲ್ಮೀಕಿ ಗುರುಪೀಠ ಮಠಾಧೀಶರು ರಾಜನಹಳ್ಳಿ ಶ್ರೀ ಪ್ರಸನ್ನಾನಂದಾಪುರಿ ಮಹಾ ಸ್ವಾಮೀಜಿ, ಅರಣ್ಯ ವಸತಿ ಮತ್ತು ವಿಹಾರಧಾಮಗಳ ನಿಗಮದ ಅಧ್ಯಕ್ಷ ಹಾಗೂ ಹೆಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಸಿ. ಅನಿಲ್ ಕುಮಾರ್, ಮಹೋತ್ಸವದಲ್ಲಿ ಹೆಚ್.ಡಿ. ಕೋಟೆ ತಾಲ್ಲೂಕು ನಾಯಕರ ಸಂಘದ ಅಧ್ಯಕ್ಷ ಎಂ.ಸಿ. ದೊಡ್ಡನಾಯಕ, ಸರಗೂರು ತಾಲ್ಲೂಕು ನಾಯಕರ ಸಂಘದ ಅಧ್ಯಕ್ಷ ಬಸವನಾಯಕ, ಮಾಜಿ ಅಧ್ಯಕ್ಷ ಪುರದಕಟ್ಟೆ ಬಸವರಾಜು, ಮೈ.ಚಾ. ನಾಯಕ ಸಂಘದ ಅಧ್ಯಕ್ಷ ರಾಮಚಂದ್ರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಿಕ್ಕ ವೀರನಾಯಕ, ಮುಖಂಡರಾದ ಎಸ್.ಸಿ. ಬಸವರಾಜು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಸಮಾಜದ ಮುಖಂಡರು ಹಾಗೂ ಬಸಾಪುರ ಮತ್ತು ಸುತ್ತಮುತ್ತಲಿನ ಗ್ರಾಮಗಳ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.
ಸಂಬಂಧಿತ ಸುದ್ದಿಗಳು

ಪರಿಶಿಷ್ಟ ಪಂಗಡದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಿಶೇಷ ಆ್ಯಪ್ ಅಭಿವೃದ್ಧಿ : ರಘುಮೂರ್ತಿ
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಸಚಿವರ ಸಭೆ
◷ 24/11/2026
ಪಶುಸಂಗೋಪನಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ : ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
ತುಮಕೂರು : ಪಶುಸಂಗೋಪನಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪಶುಸಂಪತ್ತಿನ ಸಂರಕ್ಷಣೆ ಹಾಗೂ ರೈತರಿಗ…
◷ 24/11/2026
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸೈಬರ್ ಕಮಾಂಡ್ ಸೆಂಟರ್ ಪೊಲೀಸ್ ರಿಂದ ನೋಟಿಸ್
ಬೆಂಗಳೂರು : ರಾಜ್ಯ ರಾಜಕಾರಣ ಹಾಗೂ ಆಡಳಿತ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಹಾಸನ ಜಿಲ್ಲಾಧಿಕಾರಿ ಕಚೇರಿಯ ‘ಲಂಚದ ವಾಟ್ಸ್ಆ್ಯಪ…
◷ 24/11/2026
ಡಿ.ಕೆ ಶಿವಕುಮಾರ ಅವರನ್ನು ವೈಯುಕ್ತಿಕ ಟೀಕೆ ಮಾಡ್ಕೊಂಡು ಕಾಲ ಕಳೆಯುತ್ತಿದ್ದಾರೆ : ಸಚಿವ ನರೇಂದ್ರ ಸ್ವಾಮಿ ವಾಗ್ದಾಳಿ
ಮೈಸೂರು: ರೇವಣ್ಣ ಹಲವು ಸಲ ಕನಸು ಕಾಣ್ತಾರೆ,ಅವ್ರು ಕನಸು ಕಾಣೋದು ಬಿಡಲಿ ಎಂದು ಸಚಿವ ನರೇಂದ್ರ ಸ್ವಾಮಿ ಹೇಳಿದರು. ಮೈಸೂರಿನಲ್ಲಿ ಮಾಧ…
◷ 24/11/2026
