ಮೈಸೂರು :  ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 26-27  ಸ್ಪರ್ಧೆಯಲ್ಲಿ ಬನ್ನಿಮಂಟಪ ಲಯನ್ ಶಾಲೆ ಮಕ್ಕಳು ಸಾಧನೆ ಮಾಡಿದ್ದಾರೆ. ಮೈಸೂರಿನ ಬನ್ನಿಮಂಟಪದಲ್ಲಿರುವ ಮೈಸೂರ್ ಲಯನ್ಸ್ ಶಾಲೆಯ ಮಕ್ಕಳು ಎನ್. ಆರ್. ಮೊಹಲ್ಲಾ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ 2026-27 ರ  ಸ್ಪರ್ಧೆಯಲ್ಲಿ ಭಾಗವಹಿಸಿ ಹಲವಾರು ಬಹುಮಾನಗಳು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಇವರನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು. ಮೈಸೂರು ಲಯನ್ಸ್ ಶಾಲೆಯ ಖಜಾಂಚಿ ಲಯನ್ ಜೆ ಲೋಕೇಶ್, ಮುಖ್ಯ ಶಿಕ್ಷಕಿ ಹೇಮಾವತಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು