ಧಾರವಾಡ : 2026-27 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಉದ್ದಿನಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‍ಗೆ ರೂ. 8,200 ರಂತೆ ಧಾರವಾಡ ಜಿಲ್ಲೆಯ ರೈತರಿಂದ ಖರೀದಿಸಲು ಸರ್ಕಾರದಿಂದ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಎಂದು ಜಿಲ್ಲಾ ಟಾಸ್ಕಫೋರ್ಸ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಉದ್ದಿನಕಾಳು ಉತ್ಪನ್ನವನ್ನು ಖರೀದಿಸಲು ರೈತರ ನೋಂದಣಿಯನ್ನು ಖರೀದಿ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸರ್ಕಾರದ ಆದೇಶ ಹೊರಡಿಸಿದ 80 ದಿನಗಳವರೆಗೆ ಅಂದರೆ ನವೆಂಬರ್ 18, 2026 ರಿಂದ ಫೆಬ್ರವರಿ 05, 2027 ರವರೆಗೆ ಹಾಗೂ ಉತ್ಪನ್ನ ಖರೀದಿಸಲು 90 ದಿನಗಳವರೆಗೆ ಅಂದರೆ ನವೆಂಬರ್ 18, 2026 ರಿಂದ ಫೆಬ್ರವರಿ 15, 2027 ರವರೆಗೆ ಅವಧಿಯನ್ನು ನಿಗದಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಖರೀದಿ ಕೇಂದ್ರಗಳ ವಿವರ

 ಧಾರವಾಡ ತಾಲೂಕಿನ ಟಿ.ಎ.ಪಿ.ಸಿ.ಎಮ್.ಎಸ್ ಖರೀದಿ ಸಂಸ್ಥೆಯ ದೂರವಾಣಿ ಸಂಖ್ಯೆ:9916259625, ಪಿ.ಕೆ.ಪಿ.ಎಸ್. ಉಪ್ಪಿನ ಬೆಟಗೇರಿ ದೂರವಾಣಿ ಸಂಖ್ಯೆ: 9620048221, ಹುಬ್ಬಳ್ಳಿ ತಾಲೂಕಿನ ಟಿ.ಎ.ಪಿ.ಸಿ.ಎಮ್.ಎಸ್ ಖರೀದಿ ಸಂಸ್ಥೆಯ ದೂರವಾಣಿ ಸಂಖ್ಯೆ :6360506861, ಕುಂದಗೋಳ ತಾಲೂಕಿನ ಕುಂದಗೋಳ ರೈತ ಉತ್ಪಾದಕರ ಕಂಪನಿ ದೂರವಾಣಿ ಸಂಖ್ಯೆ :7411512065, ನವಲಗುಂದ ತಾಲೂಕಿನ ಪಿ.ಕೆ.ಪಿ.ಎಸ್. ನವಲಗುಂದ ದೂರವಾಣಿ ಸಂಖ್ಯೆ 9886491644 ಅಣ್ಣಿಗೇರಿಯ ಟಿ.ಎ.ಪಿ.ಸಿ.ಎಮ್.ಎಸ್ ದೂರವಾಣಿ ಸಂಖ್ಯೆ : 8861008191 ಉತ್ಪನ್ನವನ್ನು ಖರೀದಿಸಲು ಅಗತ್ಯವಿರುವ ದಾಖಲೆಗಳು-ಆಧಾರ ಗುರುತಿನ ಚೀಟಿಯ ಮೂಲ ಪ್ರತಿ ಹಾಗೂ ಅದರ ನಕಲು ಪ್ರತಿ. ಪಹಣಿ ಪತ್ರಿಕೆಯಲ್ಲಿರುವ ಹೆಸರಿನ ರೈತರ ಆಧಾರ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆ ಪಾಸ್ ಪುಸ್ತಕದ ನಕಲು ಪ್ರತಿ. ಉದ್ದಿನಕಾಳು ಖರೀದಿಸಲು ಅನುಸರಿಸುವ ಕ್ರಮಗಳು- ಚೆನ್ನಾಗಿ ಒಣಗಿರಬೇಕು, ತೇವಾಂಶವು ಶೇ.12 ಕ್ಕಿಂತ ಕಡಿಮೆ ಇರಬೇಕು. ಉದ್ದಿನಕಾಳು ಉತ್ಪನ್ನವು ಗುಣಮಟ್ಟದ ಗಾತ್ರ, ಬಣ್ಣ ಮತ್ತು ಆಕಾರವನ್ನು ಹೊಂದಿರಬೇಕು. ಗಟ್ಟಿಯಾಗಿರಬೇಕು ಮತ್ತು ಮಣ್ಣಿನಿಂದ ಬೇರ್ಪಡಿಸಲ್ಪಟ್ಟು ಸ್ವಚ್ಛವಾಗಿರಬೇಕು, ಸಾಣಿಗೆಯಿಂದ ಸ್ವಚ್ಛಗೊಳಿಸಿರಬೇಕು. ಕ್ರಿಮಿಕೀಟಗಳಿಂದ ಮುಕ್ತವಾಗಿರಬೇಕು. ರೈತರಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದವರು ನೀಡುವ ಗೋಣಿ ಚೀಲದಲ್ಲಿ 50 ಕೆ.ಜಿ. ಪ್ರಮಾಣದಲ್ಲಿ ತುಂಬಬೇಕು. ಉದ್ದಿನಕಾಳು ಪ್ರತಿ ಎಕರೆಗೆ 04 (ನಾಲ್ಕು) ಕ್ವಿಂಟಾಲ್ ನಂತೆ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಉದ್ದಿನಕಾಳು ಬೆಳೆದ ಜಮೀನಿನ ವಿಸ್ತೀರ್ಣಕ್ಕನುಗುಣವಾದ ಪ್ರಮಾಣದಲ್ಲಿ ಎಫ್‍ಎಕ್ಯೂ ಗುಣಮಟ್ಟದ ಉದ್ದಿನಕಾಳು ಉತ್ಪನ್ನವನ್ನು ಖರೀದಿಸಲಾಗುವುದು. ಸರ್ಕಾರದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್‍ಗೆ ರೂ.8,200 ರಂತೆ ಉದ್ದಿನಕಾಳನ್ನು ಖರೀದಿಸಲಾಗುವುದು.ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಸಮಯ ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಮಾತ್ರ ಖರೀದಿಸಲಾಗುವುದು. ಧಾರವಾಡ ಜಿಲ್ಲೆಯ ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಇದರ ಉಪಯೋಗವನ್ನು ರೈತರೇ ನೇರವಾಗಿ ಪಡೆಯಬೇಕು. ಸಮಸ್ಯೆಗಳಿದ್ದಲ್ಲಿ ಧಾರವಾಡ, ಹುಬ್ಬಳ್ಳಿ, ಕುಂದಗೋಳ ಮತ್ತು ಅಣ್ಣಿಗೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಯವರನ್ನು ಹಾಗೂ ಶಾಖಾ ವ್ಯವಸ್ಥಾಪಕರು, ಕ.ರಾ.ಸ.ಮಾ.ಮ.ಮಂಡಳ, ಶಾಖೆ: ಹುಬ್ಬಳ್ಳಿ (ದೂರವಾಣಿ ಸಂಖ್ಯೆ:0836-2004419) ಇವರನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿಯ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.