ಡಿ. 12 ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜಿ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ : ನ್ಯಾಯಾಧೀಶ ಎನ್.ವಿ. ವಿಜಯ್

ಧಾರವಾಡ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (NALSA) ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA) ವತಿಯಿಂದ ಡಿಸೆಂಬರ್ 12, 2026 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ವಿ. ವಿಜಯ್ ಅವರು ಹೇಳಿದರು.ಅವರು ಇಂದು (ನ.23) ಧಾರವಾಡ ಜಿಲ್ಲಾ ನ್ಯಾಯಾಲಯದ 2 ನೇ ಮಹಡಿಯಲ್ಲಿರುವ ಕಾನ್ಫರೆನ್ಸ್ ಹಾಲ್‍ನಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಪತ್ರಿಕಾಗೋಷ್ಠಿ ನಡೆಸಿ, ಮಾತನಾಡಿದರು. ಲೋಕ ಅದಾಲತ್‍ನಲ್ಲಿ ಸಾರ್ವಜನಿಕರು ಹಾಗೂ ವಿವಿಧ ಕಕ್ಷಿದಾರರಿಗೆ ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು, ಮೋಟಾರು ವಾಹನ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ಪಾಲು ವಿಭಾಗ ಪ್ರಕರಣಗಳು, ಕಾರ್ಮಿಕ ಪ್ರಕರಣಗಳು, ವಿದ್ಯುತ್ ಮತ್ತು ನೀರಿನ ಶುಲ್ಕದ ಬಾಕಿ ಪ್ರಕರಣಗಳು ಸೇರಿದಂತೆ ರಾಜಿ ಮಾಡಿಕೊಳ್ಳಬಹುದಾದ ಇತರೆ ಎಲ್ಲಾ ಪ್ರಕರಣಗಳನ್ನು ಲೋಕ ಅದಾಲತ್‍ನಲ್ಲಿ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.ಪ್ರಕರಣಗಳನ್ನು ತ್ವರಿತವಾಗಿ ಹಾಗೂ ಪರಸ್ಪರ ಒಪ್ಪಿಗೆಯ ಮೂಲಕ ಇತ್ಯರ್ಥಪಡಿಸುವುದು ಲೋಕ ಅದಾಲತ್‍ನ ಪ್ರಮುಖ ಉದ್ದೇಶವಾಗಿದೆ. ಇದರಿಂದ ಕಕ್ಷಿದಾರರಿಗೆ ಸಮಯ ಮತ್ತು ವೆಚ್ಚ ಉಳಿತಾಯವಾಗುವುದರ ಜೊತೆಗೆ ಪ್ರಕರಣಗಳ ಇತ್ಯರ್ಥವೂ ಸುಲಭವಾಗಲಿದೆ ಎಂದು ಅವರು ಹೇಳಿದರು.ಲೋಕ ಅದಾಲತ್‍ನಲ್ಲಿ ಪ್ರಕರಣ ಇತ್ಯರ್ಥವಾದಲ್ಲಿ, ಸಂಬಂಧಪಟ್ಟ ಕಕ್ಷಿದಾರರು ಈಗಾಗಲೇ ನ್ಯಾಯಾಲಯದ ಶುಲ್ಕ ಪಾವತಿಸಿದ್ದರೆ ಸಂಪೂರ್ಣ ಕೋರ್ಟ್ ಫೀ ಅನ್ನು ಮರುಪಾವತಿಸಲಾಗುತ್ತದೆ. ಅಲ್ಲದೆ, ಲೋಕ ಅದಾಲತ್ ನೀಡುವ ತೀರ್ಪು ಅಥವಾ ಅವಾರ್ಡ್‍ಗೆ ಯಾವುದೇ ಸಿವಿಲ್ ನ್ಯಾಯಾಲಯದ ತೀರ್ಪಿಗೆ ಸಮಾನವಾದ ಕಾನೂನುಬದ್ಧ ಮೌಲ್ಯವಿರುತ್ತದೆ ಎಂದರು.ಆದ್ದರಿಂದ ಸಾರ್ವಜನಿಕರು ಹಾಗೂ ಎಲ್ಲಾ ಕಕ್ಷಿದಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ತಮ್ಮ ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಮುಂದೆ ಬರಬೇಕು ಎಂದು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಲ್ಲಪ್ಪ. ಎಮ್. ಬಡಿಗೇರ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.
ಸಂಬಂಧಿತ ಸುದ್ದಿಗಳು

ಬುಡಕಟ್ಟು ಸಮುದಾಯದ ಸಮಸ್ಯೆ ಆಲಿಸಿ, ಅಭಿವೃದ್ಧಿಗೆ ಒತ್ತು ನೀಡಿ : ಟಿ ರಘುಮೂರ್ತಿ
ಮೈಸೂರು : ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘುಮೂರ್ತಿ ಅವರು ಸರಗೂರು ಮತ್ತು…
◷ 23/11/2026
ಸುಳ್ಳು ಹೇಳುವುದರಲ್ಲಿ ಹೆಚ್ ಡಿಕೆಗೆ ಪದ್ಮಶ್ರೀ ಕೊಡಿಸಬೇಕು : ಡಿ.ಕೆ.ಸುರೇಶ್ ವಾಗ್ದಾಳಿ
ರಾಮನಗರ : ಅಸೂಯೆ ಪಟ್ಟುಕೊಳ್ಳುವುದರಲ್ಲಿ ಮತ್ತು ಸುಳ್ಳು ಹೇಳುವುದರಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಪದ್ಮಶ್ರೀ ಕೊಡಿಸಬ…
◷ 23/11/2026
ದಕ್ಷಿಣ ಭಾರತ ಗಾಲ್ಫ್ ಅಡಿಕ್ಟ್ಸ್ ಟೂರ್ನಮೆಂಟ್ನಲ್ಲಿ ಒಟ್ಟು ಅಂಕಗಳ ವಿಭಾಗದ ಪ್ರಶಸ್ತಿ ಗೆದ್ದ ಮೈಸೂರಿನ ಗಾಲ್ಫ್ ಆಟಗಾರ ಎಸ್.ಜಿ. ಪ್ರಭು
ಮೈಸೂರು: ಮೈಸೂರಿನ ಗಾಲ್ಫ್ ಆಟಗಾರ ಎಸ್.ಜಿ. ಪ್ರಭು ಅವರು, ಮೈಸೂರಿನ ಜಯಚಾಮರಾಜ ಒಡೆಯರ್ ಗಾಲ್ಫ್ ಕ್ಲಬ್ (JWGC) ವತಿಯಿಂದ ಆಯೋಜಿಸಲಾಗ…
◷ 23/11/2026
ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ಎ.ಐ (AI) ತಂತ್ರಜ್ಞಾನದ ಬಲ: ತುರ್ತು ಚಿಕಿತ್ಸೆಗೆ 2.50 ಲಕ್ಷ ರೂ. ವರೆಗೆ ನೆರವು ; ಸಿಎಸ್ ಡಾ. ಶಾಲಿನಿ ರಜನೀಶ್
ಬೆಂಗಳೂರು : ರಾಜ್ಯದಲ್ಲಿ ರಸ್ತೆ ಅಪಘಾತಗಳು ಮತ್ತು ಅವುಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು ಕೃತಕ ಬುದ್ಧಿಮತ…
◷ 23/11/2026
